Sunday, June 28, 2026
Google search engine
Homeರಾಜ್ಯಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ರಾಜ್ಯದಲ್ಲಿ ಕೆರೆ ಒತ್ತುವರಿ ತೆರವುಗೊಳಿಸದೇ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಧಿಕಾರಿ ಹಾಗೂ ಮುಖ್ಯ ಜಿಲ್ಲಾ ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಡಿಸಿ, ಸಿಇಒ ಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೆರೆಗಳ ಒತ್ತುವರಿಗೆ ಸೂಚಿಸಿದ್ದರೂ ಒಂದೂ ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದಲ್ಲಿ 10931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು.

ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ.  ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.

ಸಿಂಧುತ್ವ ಪ್ರಮಾಣ ಪತ್ರವನ್ನು ನಿಗದಿತವಾಗಿ ಒಂದು ತಿಂಗಳ ಒಳಗಾಗಿ ನೀಡಬೇಕಿದ್ದರೂ, ಅದನ್ನು ಕೆಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ವಿಲೇವಾರಿ ಮಾಡದೆ ಸತಾಯಿಸುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ವಿಳಂಬ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರಲು ಕಾರಣವೇನು? ಈ ಬಗ್ಗೆ ಆತ್ಮಾವಲೋಕನ ನಡೆಸಬೇಕು. ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ ಎಂದು ಅವರು ವಿವರಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದರೂ, ಫಲಿತಾಂಶದಲ್ಲಿ ಯಾವಾಗಲೂ ಹಿಂದಿರಲು ಕಾರಣವೇನು? ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒಗಳು ನಿರಂತರ ಗಮನ ಹರಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿಯುಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು. ಇದು ಯಾಕೆ ಕಡಿಮೆಯಾಗುತ್ತಿದೆ? ಪೋಡಿಮುಕ್ತ ಅಭಿಯಾನ ನಿರಂತರವಾಗಿ ಮುಂದುವರೆಸಬೇಕು. ಶೇ.63 ಪೋಡಿಮುಕ್ತ ಆಗಿದ್ದು, ಇದರಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅವರು ಹೇಳಿದರು.

ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಕಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರುದ್ರಭೂಮಿ, ಕಬರಸ್ಥಾನಗಳಿಗೆ ಜಮೀನು ಒದಗಿಸುವುದನ್ನು ವಿಳಂಬ ಮಾಡಬಾರದು. ನಿವೇಶನಗಳು ಅಗತ್ಯವಿರುವ ಇಲಾಖೆಗಳಿಗೆ ನಿವೇಶನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು.  1858 ಗ್ರಾಮೀಣ ಅಂಗನವಾಡಿಗಳಿಗೆ 5187 ನಗರ ಅಂಗನವಾಡಿಗಳಿಗೆ ನಿವೇಶನ ಅಗತ್ಯವಿದೆ. 14 ಸರ್ಕಾರಿ ಕಾಲೇಜು ನಿವೇಶನ ಹಂಚಿಕೆಯಾಗಿಲ್ಲ. ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. ಇದನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಅವರು ನುಡಿದರು.

ಜಿಲ್ಲಾಧಿಕಾರಿ, ತಹಶೀಲ್ದಾರ್, ಎಸಿ ಕೋರ್ಟ್ ಗಳಲ್ಲಿ ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಮೆರಿಟ್ ಮೇಲೆ ತೀರ್ಮಾನ ಮಾಡಬೇಕು. ಪ್ರಕರಣಗಳನ್ನು ಮುಂದಕ್ಕೆ ಹಾಕುವ ಪ್ರವೃತ್ತಿ ಇರಬಾರದು ಎಂದು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments