Sunday, November 24, 2024
Google search engine
Homeತಾಜಾ ಸುದ್ದಿರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಾನವೀಯತೆಯಿಂದ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಾನವೀಯತೆಯಿಂದ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ ಎಂದರು.

ರಾಜ್ಯದಲ್ಲಿ ತಮ್ಮ ಸರ್ಕಾರದ ಅವಧಿಯಲ್ಲಿ 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ, ಪರಿಹಾರ ನೀಡುವಾಗ ಮಾನವೀಯತೆ ನೋಡಿ. ತಾಂತ್ರಿಕ ಕಾರಣವೊಡ್ಡಿ ಪರಿಹಾರ ನೀಡುವಾಗ ತಡ ಮಾಡಬೇಡಿ ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ 2225 ಗ್ರಾಮಗಳು ಮತ್ತು 20,38,334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಸಂತ್ರಸ್ಥ. ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಿ. ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ SDRF ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಿ ಎನ್ನುವ ಸೂಚನೆ ನೀಡಿದರು

ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎನ್ನುವ ಸೂಚನೆ ನೀಡಿದ ಸಿಎಂ, ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಇದೆ ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿ ಇತ್ಯರ್ಥ ಮಾಡಲು ಸೂಚಿಸಿದರು

ಪಿಂಚಣಿ ಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು. ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಗಳ ಕಚೇರಿಗಳಿಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಬಾಡಿಗೆ ನೀಡುತ್ತಿದ್ದೇವೆ. ಇವರಿಗೆ ಸ್ವಂತ ಕಟ್ಟಡ ಕೊಡಿ. ಸ್ವಂತ ಕಟ್ಟಡದ ಅವಕಾಶ ಇಲ್ಲದಿದ್ದರೆ ಜಾಗ ನೀಡಿ ಕಟ್ಟಡ ಕಟ್ಟಿಸಿ.  ಇದರಿಂದ ನಮಗೆ ವರ್ಷಕ್ಕೆ 40-50 ಕೋಟಿ ಬಾಡಿಗೆ ಹಣ ಉಳಿತಾಯವಾಗುತ್ತದೆ ಎಂದು ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments