Thursday, November 21, 2024
Google search engine
Homeಜಿಲ್ಲಾ ಸುದ್ದಿಮೈಸೂರು ದಸರಾ ವಿಜೃಂಭಣೆಯಿಂದ ಆಚರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು ದಸರಾ ವಿಜೃಂಭಣೆಯಿಂದ ಆಚರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು. ಕಳೆದ ವರ್ಷ ಕೊರೊನಾ-ಬರಗಾಲ ಮುಂತಾದ ಕಾರಣಕ್ಕೆ ಹೆಚ್ಚು ವಿಜೃಂಭಣೆಯಿಂದ ಮಾಡಲಿಲ್ಲ ಎಂದು ಅವ ನುಡಿದರು.

ದಸರಾ ಮಹೋತ್ಸವ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿ ಸಭೆ ನಿರ್ಧರಿಸಿತು.

ಸಭೆಯಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ. ವಿಜ್ರಂಭಣೆಯ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತೇವೆ ಎಂದು ಅವರು ಸಲಹೆ ನೀಡಿದರು.

ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಿ. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು ಎಂದು ಅವರು ಹೇಳಿದರು.

ಕರ್ನಾಟಕ ಸಂಭ್ರಮ 50 ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಿ ಎಂದು ಸಿದ್ದರಾಮಯ್ಯ ಸೂಚಿಸಿದರು.

ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು ಎಂದು ಅವರು ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments