Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜ್ಯ

ಅಂಜನಾದ್ರಿ ಬೆಟ್ಟಕ್ಕೆ ರೋಪ್‌ ವೇ, ಪ್ರದಕ್ಷಿಣೆ ಮಾರ್ಗ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 36 ವೀಕ್ಷಣೆಗಳು
anjanadri tempe

ಬೆಂಗಳೂರು: ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ ಎನ್‍ಒಸಿ ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ:

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ.

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment