Sunday, June 7, 2026
Google search engine
Homeರಾಜ್ಯವಾರದೊಳಗೆ ಉಪಚುನಾವಣೆ ಘೋಷಣೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ವಾರದೊಳಗೆ ಉಪಚುನಾವಣೆ ಘೋಷಣೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಕೇರಳ ವಿಧಾನಸಭೆ ಚುನಾವಣೆ ಇರುವುದರಿಂದ ಇನ್ನೊಂದು ವಾರದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆಗೂ ಉಪಚುನಾವಣೆ ಘೋಷಣೆಯಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕುಟುಂಬದಿಂದ ಬೇಕಾದಷ್ಟು ಜನ ಟಿಕೆಟ್ ಕೇಳಬಹುದು. ಆದರೆ ಒಬ್ಬರಿಗೆ ಟಿಕೆಟ್ ನೀಡಲಾಗುವುದು. ಎರಡು ಕ್ಷೇತ್ರಕ್ಕೂ ಹೈಕಮಾಂಡ್ ಟಿಕೆಟ್ ಫೈನಲ್ ಮಾಡಲಿದೆ. ಉಪಚುನಾವಣೆಗೆ ಬೇಕಾದ ತಯಾರಿ ನಾವು ಮಾಡಿಕೊಂಡಿದ್ದೇವೆ ಎಂದರು.

ವೈದ್ಯಕೀಯ ಕಾಲೇಜ್ಗೆ ಅಡಿಗಲ್ಲು ಸಮಾರಂಭ, ಶಿವಾಜಿ ಮತ್ತು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪಿಸಲು ತಲಾ 40 ಲಕ್ಷ ಬಿಡುಗಡೆ ಮಾಡಿದ್ದು ಚುನಾವಣೆ ಗಿಮಿಕಲ್ಲ. ಬಿಜೆಪಿಯವರು ಆರೋಪ ಮಾಡುವುದನ್ನು ಬಿಟ್ಟು ಬೇರೇನೂ ಮಾಡಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಯಾಕೆ ಮೆಡಿಕಲ್ ಕಾಲೇಜ್ ಮಾಡಲಿಲ್ಲ ಎಂದು ಸಿಎಂ ಪ್ರಶ್ನಿೆಸಿದರು.

ಸಿಲಿಂಡರ್ ಪೂರೈಕೆಗೆ ಸಂಬಂಧಿಸಿದಂತೆ ಆಹಾರ ಸಚಿವರು ಈಗಾಗಲೇ ಎರಡು ಸಲ ಸಭೆ ನಡೆಸಿದ್ದಾರೆ. ಈಗಾಗಲೇ ಕೇಂದ್ರ ಸಚಿವರಿಗೂ ಪತ್ರ ಬರೆಯಲಾಗಿದೆ. ಸಿಲಿಂಡರ್ ಅಭಾವ ಆಗದಂತೆ ನೋಡಿಕೊಳ್ಳಲಾಗುವುದು ಎಂದ ಸಿಎಂ, ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮಾರ್ಚ 27ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments