Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ತಾಜಾ ಸುದ್ದಿ

ನಿಮ್ಮ ಷಡ್ಯಂತ್ರಕ್ಕೆ ಹೆದರಲ್ಲ, ರಾಜೀನಾಮೆ ನೀಡಲ್ಲ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
siddaramiah
siddaramiah

ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಸಿ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಬಹಿರಂಗವಾಗಿ ತೊಡೆತಟ್ಟಿದರು.

ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದ್ದೇವೆ

ರಾಜ್ಯದ ಆರ್ಥಿಕ-ಸಾಮಾಜಿಕ ಪ್ರಗತಿಗೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಬೇಕು. ಕೃಷಿ, ಕೈಗಾರಿಕೆ ಬೆಳವಣಿಗೆ ಆದರೆ ಮಾತ್ರ GDP ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೃಷಿ ಮತ್ತು ಕೈಗಾರಿಕೆ ಹಾಗೂ ವಸತಿಗೆ ಅಪಾರ ಪ್ರಮಾಣದ ವಿದ್ಯುತ್ ಅಗತ್ಯ. ಕೃಷಿ, ಕೈಗಾರಿಕೆ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗದಿಂದ ಜಿಡಿಪಿ ಪ್ರಗತಿಯಾಗುತ್ತದೆ. ಆದ್ದರಿಂದ ನಾವು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಗಳಾಗುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ಅದರ ಭಾಗವಾಗಿಯೇ ಈ ವಿದ್ಯುತ್ ಉತ್ಪಾದನಾ ತಯಾರಿಕಾ ಘಟಕ ಲೋಕಾರ್ಪಣೆ ಮಾಡಿದ್ದೇನೆ ಎಂದರು.

1500 ಮೌಲ್ಯದ ಕೋಟಿ ವಿದ್ಯುತ್ ಅನ್ನು ನಾವು ಹೊರಗಡೆಗೆ ಮಾರಾಟ ಮಾಡಿದ್ದೇವೆ. ಕಳೆದ ವರ್ಷ ಮಳೆ ಬರಲಿಲ್ಲ. ಬರಗಾಲ ಇತ್ತು. ಬರಗಾಲದಲ್ಲೂ ಕೂಡ ನಾವು ಅಗತ್ಯ ವಿದ್ಯುತ್ ಪೂರೈಸಿದೆವು.

2030 ಕ್ಕೆ 60000 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಇದೆ. ಇದನ್ನು ನಾನು ಬಜೆಟ್ ನಲ್ಲೇ ಘೋಷಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬಳಕೆ, ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ನಾವು ಉತ್ಪಾದನೆ ಹೆಚ್ಚಿಸಿ ಸ್ವಾವಲಂಬಿ ಆಗಿದ್ದೇವೆ. ನಾವು ಹೊರಗಡೆಗೆ ವಿದ್ಯುತ್ ಮಾರಾಟ ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ ಎಂದರು.

ಯಲಹಂಕದ ವಿದ್ಯುತ್ ಸ್ಥಾವರಕ್ಕೆ ನಾವೇ ನಮ್ಮ ಸರ್ಕಾರದಲ್ಲೇ ಶಂಕು ಸ್ಥಾಪನೆ ಮಾಡಿದ್ದೆವು. ಈಗ ನಮ್ಮದೇ ಸರ್ಕಾರ ಇದನ್ನು ಲೋಕಾರ್ಪಣೆ ಕೂಡ ಮಾಡಿದ್ದೇವೆ.

ಬೋನಸ್ ಘೋಷಣೆ

ಯಲಹಂಕ ವಿದ್ಯುತ್ ಸ್ಥಾವರದ ಆರಂಭಕ್ಕೆ ಶ್ರಮಿಸಿದ ಎಲ್ಲಾ ಕಾರ್ಮಿಕರಿಗೆ 5000 ರೂಪಾಯಿ ಬೋನಸ್ ಅನ್ನು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಶಾಸಕ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment