Thursday, November 21, 2024
Google search engine
Homeಜಿಲ್ಲಾ ಸುದ್ದಿಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇರುವ ಮೋದಿ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ ಎಂದರು.

ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್ . ಬಿಜೆಪಿಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಕೆಗಾಗಲಿ ಏನೇನೂ ಪ್ರಯೋಜನವಿಲ್ಲ ಎಂದರು.

10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿ ಜಗ್ಗಲಿಲ್ಲ.

ಬಿಜೆಪಿ, ಬಡವರು, ರೈತರು ಮತ್ತು ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ ಎಂದರು.

ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ  ತಂದಿದ್ದೇವೆ.  ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್‍ಗಳ ಹಾರ ಹಾಕಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಶಕ್ತಿ ತುಂಬಬೇಕು ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments