Friday, November 22, 2024
Google search engine
Homeತಾಜಾ ಸುದ್ದಿಅಂಗವಿಕಲ ಕಾರ್ಯಕರ್ತರ ಬಳಿ ಖುದ್ದು ತೆರಳಿ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

ಅಂಗವಿಕಲ ಕಾರ್ಯಕರ್ತರ ಬಳಿ ಖುದ್ದು ತೆರಳಿ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ನಡೆಯಿತು.

ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದ ಮುಖ್ಯಮಂತ್ರಿಗಳು.

ಬಳಿಕ ತಮ್ಮ ಸಿಬ್ಬಂದಿಗೆ ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಲು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡುತ್ತಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ನೆರೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments