Thursday, October 1, 2026
Google search engine
Homeಜಿಲ್ಲಾ ಸುದ್ದಿಅವಾಚ್ಯ ಪದ ಬಳದಿದ್ದು ಸುಳ್ಳಾಗಿದ್ದರೆ ಸಿಟಿ ರವಿ ಬಂಧನ ಆಗುತ್ತಿತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಅವಾಚ್ಯ ಪದ ಬಳದಿದ್ದು ಸುಳ್ಳಾಗಿದ್ದರೆ ಸಿಟಿ ರವಿ ಬಂಧನ ಆಗುತ್ತಿತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿ ಅವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬಿಜೆಪಿ ಮುಖಂಡರು ಬೆಂಬಲಿಸುತ್ತಿದ್ದಾರೆ. ಸಿಟಿ ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಸಿಟಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ ಇದೊಂದು ಅಪರಾಧ ಎಂದರು.

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು  ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ . ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ.

ಪದಬಳಕೆಯನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ ಎಂದು ಅವರು ವಿವರಿಸಿದರು.

ಕಾನೂನಿನ ಕ್ರಮ

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿಕೊಂಡಿರುವ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿ, ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ.  ಬೆಳಗಾವಿಯಲ್ಲಿ ಜನರ ಆಕ್ರೋಶದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

ಮಂಡ್ಯ ಅಪ್ಪಟ ಕನ್ನಡದ ನೆಲ

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಪ್ರದೇಶ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ.  ಕನ್ನಡ ನಾಡಿನ ಭಾಷೆ ,ರಾಜ್ಯಭಾಷೆ ಆಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments