Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಮುಂದೆ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
siddaramiah

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು.

ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು.

ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದರು.

ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು ಎಂದರು.

ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ ನಡೆಸುವವರಿಗೆ ಯಾವ ದೇವರೂ ಸಹಾಯ ಮಾಡುವುದಿಲ್ಲ ಎಂದರು.

ಅಂಬೇಡ್ಕರ್ ಅವರ ಸಂವಿಧಾನ, ಬಸವಾದಿ ಶರಣರ ಆಶಯದಂತೆ ಜಾತಿ ನಿರ್ಮೂಲನೆ ಮಾಡಬೇಕಿದೆ. ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇದೆ.  ನಿಂತ ನೀರಾಗಿರುವ ಜಾತಿಯನ್ನು ಅಳಿಸಬೇಕಾದರೆ ಶಿಕ್ಷಣ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಒದಗಿಸಬೇಕು. ಆಗ ಮಾತ್ರ ಜಾತಿ ಅಳಿಸುವ ದಿಕ್ಕಿನಲ್ಲಿ ಸಾಗಬಹುದು ಎಂದರು.

ಮೊದಲೆಲ್ಲಾ ವ್ಯಕ್ತಿಗಳ ಅರ್ಹತೆಯನ್ನು ಜಾತಿ ಆಧಾರದಲ್ಲಿ ಅಳೆಯುತ್ತಿದ್ದರು. ಇದು ಹೋಗಿ ನಿಜವಾದ ಅರ್ಹತೆ ಆಧಾರದಲ್ಲಿ ಅಳೆಯಬೇಕು. ನಾನು ಉಪಮುಖ್ಯಮಂತ್ರಿಯಾಗಿ ಮೊದಲ ಬಜೆಟ್ ಮಂಡಿಸುವಾಗ “ನೂರು ಕುರಿ ಎಣಿಸಲು ಬರದವನು ಬಜೆಟ್ ಮಂಡಿಸ್ತಾನಾ” ಎಂದು ಅಣಕಿಸಿದ್ದರು. ಈಗ ನಾನು 16 ಬಜೆಟ್ ಮಂಡಿಸಿದ್ದೇನೆ. ಆದ್ದರಿಂದ ಅವಕಾಶ ಮುಖ್ಯ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ಆಚಾರವೇ ಸ್ವರ್ಗ, ಅನಾಚಾರವೇ ನರಕ ಎನ್ನುವ ಬಸವಣ್ಣನವರ ಸರಳ ಧರ್ಮದ ಸಾರವನ್ನು  ಪಾಲಿಸಬೇಕು. ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿ. ಮಾಡಬಾರದ ಪಾಪದ ಕೆಲಸಗಳನ್ನು ಮಾಡಿ ಒಳ್ಳೇದು ಮಾಡಪ್ಪಾ ಅಂದ್ರೆ ದೇವರು ಒಳ್ಳೇದು ಮಾಡಲ್ಲ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment