Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜಕೀಯ

ವಿಚಾರಣೆಗೆ ಹಿಂದಿನ ದಿನ ಇಡಿ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
siddaramiah
siddaramiah

ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ಜಾರಿ ನಿರ್ದೇಶನಾಲಯ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಜಾರಿ ನಿರ್ದೇಶನಾಲಯದವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಇಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.

ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು. ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment