Thursday, November 21, 2024
Google search engine
Homeತಾಜಾ ಸುದ್ದಿಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಾವಿದರ ಮಾಸಾಶನವನ್ನು 3000 ರೂ.ಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂ.ಗಳಿಂದ 3000 ರೂ.ಗೆ ಹೆಚ್ಚಿಸಲಾಗುವುದು ಎಂದರು.

ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು.

ಬಿಜೆಪಿ ಸರ್ಕಾರ ಕಲೆ ಸಂಸ್ಕೃತಿಗೆ ದ್ರೋಹ ಬಗೆದು ಪ್ರಶಸ್ತಿ ವಿತರಣೆ ನಿಲ್ಲಿಸಿತ್ತು. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್.ಶಿವಪ್ರಕಾಶ್, ಕೋಟಿಗಾನಲ್ಲಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments