ಕನ್ನಡ ಕಿರುತೆರೆಯ ಕಾಮಿಡಿ ಕಿಲಾಡಿಗಳು-3 ವಿಜೇತ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಲೋ ಬಿಪಿಯಿಂದ ಅಕಾಲಿಕ ನಿಧನರಾಗಿದ್ದಾರೆ. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು.
ಉಡುಪಿ ಮೂಲದ ರಾಕೇಶ್ ಪೂಜಾರಿ ಸೋಮವಾರ ಮುಂಜಾನೆ 3.30ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶನಿವಾರ ಕಾಂತಾರಾ-1 ಚಿತ್ರೀಕರಣದಲ್ಲಿ ತಮ್ಮ ಪಾತ್ರವನ್ನು ಪೂರ್ಣಗೊಳಿಸಿದ್ದ ರಾಕೇಶ್ ಪೂಜಾರಿ, ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಾಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ರಾಕೇಶ್ ಪೂಜಾರಿ ಸ್ನೇಹಿತರ ಜೊತೆ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದರು. ನಂತರ ಸುಸ್ತಾಗುತ್ತಿದೆ ಎಂದು ಹೇಳುತ್ತಿದ್ದ ಅವರು ಅಸ್ವಸ್ಥಗೊಂಡಿದ್ದರು. ಸ್ನೇಹಿತರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.



