ಚುನಾವಣಾ ಪ್ರಚಾರದ ವೇಳೆ ಬಹಿರಂಗ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ನೋಟಿಸ್ ಜಾರಿಮಾಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖುದ್ದು ಏಪ್ರಿಲ್ 29ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಚುನಾವಣಾ ಆಯೋಗ ಸೂಚಿಸಿದೆ.
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಬಡವರು ಮತ್ತು ದಲಿತರ ಆಸ್ತಿಯನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಿತ್ತುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಇದೇ ವೇಳೆ ಆರ್ಥಿಕ ಸಮೀಕ್ಷೆ ಮಾಡಿ ಸಂಪತ್ತು ಹಂಚಿಕೆ ಮಾಡುತ್ತೇವೆ. ಕೆಲವೇ ಮಂದಿ ಬಳಿ ಇರುವ ಆಸ್ತಿಯನ್ನು ಶೇ.90ರಷ್ಟು ಜನರಿಗೆ ಹಂಚುತ್ತೇವೆ. ಪಿತ್ರಾರ್ಜಿತ ಆಸ್ತಿಗೆ ಶೇ.55ರಷ್ಟು ತೆರಿಗೆ ವಿಧಿಸುತ್ತೇವೆ ಎಂಬ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.