ಮಾಜಿ ಸಚಿವ ಎಚ್.ಡಿ.ರೇವಣ್ಣ ಕುಟುಂಬದ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅವರ ಆಪ್ತನೇ ಪೊಲೀಸರಿಗೆ ದೂರು ನೀಡಿದ್ದಾರೆ.
ಸೂರಜ್ ರೇವಣ್ಣ ಪರ ಪೊಲೀಸರಿಗೆ ದೂರು ನೀಡಿದ್ದ ಶಿವಕುಮಾರ್ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರಿಂದ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು.
ಮಂಗಳವಾರ ದಿಢೀರನೆ ಕಾಣಿಸಿಕೊಂಡ ಶಿವಕುಮಾರ್, ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರಿಗೆ ತನ್ನ ಮೇಲೂ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಸೂರಜ್ ರೇವಣ್ಣ ಆಪ್ತನಾಗಿ ಗುರುತಿಸಿಕೊಂಡಿದ್ದ ಶಿವಕುಮಾರ್, ನನ್ನನ್ನು ಒಂದು ವಾರ ಕಾಲ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಲ್ಲದೇ ಪೊಲೀಸರಿಗೆ ದೂರು ನೀಡದಂತೆ 5 ಕೋಟಿ ನೀಡುವುದಾಗಿ ಆಮೀಷ ಒಡ್ಡಿದ್ದರು ಎಂದು ದೂರು ನೀಡಿದ್ದಾರೆ.