Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಬೆಂಗಳೂರು

ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 457 ವೀಕ್ಷಣೆಗಳು
krishna byregowda

ಬೆಂಗಳೂರು: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಾರಿಗೆ ಹಾಗೂ ಸಂಚಾರ ದಟ್ಟಣೆ (Traffic) ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮೆಟ್ರೋ ಜಾಲ ವಿಸ್ತರಣೆ, ಉಪನಗರ ರೈಲು ಯೋಜನೆ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ದೀರ್ಘಕಾಲಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆ ನಿಟ್ಟಿನಲ್ಲಿ ಬಹು ನಿರೀಕ್ಷಿತವಾದ ಕೆಆರ್ ಪುರಂ ನಿಂದ ಹೆಬ್ಬಾಳ ವರೆಗಿನ ಬ್ಲೂ ಲೈನ್ ಮೆಟ್ರೋ ಕಾಮಗಾರಿಯನ್ನು ಶೀಘ್ರ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಗುರುವಾರ ಬ್ಲೂ ಲೈನ್ ಮೆಟ್ರೋ ಕಾಮಗಾರಿ ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಕರ್ತರ ಜೊತೆ ಮಾಹಿತಿ ಹಂಚಿಕೊಂಡ ಅವರು, “ಬೆಂಗಳೂರು ನಗರಕ್ಕೆ ಅತ್ಯಂತ ಅವಶ್ಯಕವಾದ ಕೆ.ಆರ್.ಪುರದಿಂದ ಹೆಬ್ಬಾಳ ಮತ್ತು ಹೆಬ್ಬಾಳದಿಂದ ವಿಮಾನ ನಿಲ್ದಾಣದವರೆಗಿನ ಮೆಟ್ರೋ ಮಾರ್ಗವು (2A ಮತ್ತು 2B ಹಂತ) ಬ್ಲೂ ಲೈನ್ ಅಡಿಯಲ್ಲಿ ಬರುತ್ತದೆ.

ಕೆ.ಆರ್.ಪುರದಿಂದ ಏರ್‌ಪೋರ್ಟ್‌ಗೆ 38.44 ಕಿ.ಮೀ ಮತ್ತು ಕೆ.ಆರ್.ಪುರದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ಗೆ 19.75 ಕಿ.ಮೀ. ಇವೆರಡನ್ನು ಸೇರಿಸಿದರೆ ಒಟ್ಟು ಸುಮಾರು 60 ಕಿ.ಮೀ ಉದ್ದದ ಲೈನ್ ಆಗಲಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್.ಪುರ ಹಾಗೂ ಹೆಬ್ಬಾಳ ಮಾರ್ಗವಾಗಿ ಏರ್‌ಪೋರ್ಟ್‌ವರೆಗೆ ಒಟ್ಟು ಸುಮಾರು 58-59 ಕಿ.ಮೀ ವಿಸ್ತೀರ್ಣದ ಈ ಯೋಜನೆ ಪೂರ್ಣಗೊಂಡರೆ ಬೆಂಗಳೂರು ಜನರಿಗೆ ದೊಡ್ಡ ಮಟ್ಟದ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಲಿದೆ” ಎಂದರು.

ಕೆ.ಆರ್.ಪುರದಿಂದ ನಾಗವಾರ ಮತ್ತು ಅಲ್ಲಿಂದ ಹೆಬ್ಬಾಳದವರೆಗಿನ ಮಾರ್ಗವು ಅತ್ಯಂತ ಸಂಕೀರ್ಣವಾಗಿದ್ದು, ಕಾಮಗಾರಿಗಳು ತಡವಾಗಿವೆ. ಕೆ.ಆರ್.ಪುರಂ ಬಳಿ 2A ಹಂತದ ಕಾಮಗಾರಿ ಆರಂಭಿಸಲು ಮರಗಳನ್ನು ಕಡಿಯುವುದಕ್ಕೆ ನ್ಯಾಯಾಲಯದಿಂದ ಒಂದು ವರ್ಷ ಕಾಲ ತಡೆಯಾಜ್ಞೆ ಇದ್ದ ಕಾರಣ, ಕಾಮಗಾರಿ ನಿಗದಿತ ಅವಧಿಗಿಂತ ಕನಿಷ್ಠ ಒಂದು ವರ್ಷ ವಿಳಂಬವಾಗಿದೆ. ಇತರೆ ನಗರಗಳಲ್ಲಿ ಮೆಟ್ರೋ ಕಾಮಗಾರಿಗೆ ಮರ ಕಡಿಯಲು ಹೈಕೋರ್ಟ್ ವರೆಗೆ ಹೋಗುವ ಅಗತ್ಯವಿರುವುದಿಲ್ಲ, ಆದರೆ ಬೆಂಗಳೂರಿನಲ್ಲಿ ಪಿಐಎಲ್ ಹಾಕಿ, ಟ್ರೀ ಕಮಿಟಿ ಮತ್ತು ಹೈಕೋರ್ಟ್ ಅನುಮತಿ ಪಡೆದು, ಪ್ರತಿಯೊಂದು ಮರ ಕಡಿಯುವುದಕ್ಕೂ ಕಠಿಣವಾದ ಪ್ರಕ್ರಿಯೆಯನ್ನು ಪಾಲಿಸಬೇಕಾಗಿದೆ.

ಇದರ ಜೊತೆಗೆ, ವೀರಣ್ಣಪಾಳ್ಯದಿಂದ ಹೆಬ್ಬಾಳದವರೆಗಿನ ಕಾಮಗಾರಿ ಸೇರಿದಂತೆ ಹಲವು ಕಡೆಗಳಲ್ಲಿ ಕಾವೇರಿ ನೀರು ಸರಬರಾಜು ಪೈಪ್‌ಲೈನ್‌ಗಳು ಮತ್ತು ಒಳಚರಂಡಿ ಲೈನ್‌ಗಳು ಅಡ್ಡಿಯಾಗಿವೆ. ಇವುಗಳನ್ನು ತೆರವುಗೊಳಿಸಿ ಹೊಸ ಲೈನ್‌ಗಳನ್ನು ಹಾಕಲು ಸುಮಾರು 6 ರಿಂದ 8 ತಿಂಗಳು ಕಾಲ ವಿಳಂಬವಾಗಿದೆ. ಹೊರವರ್ತುಲ ರಸ್ತೆಯಲ್ಲಿ ಅತಿಯಾದ ವಾಹನ ದಟ್ಟಣೆ ಇರುವುದರಿಂದ, ಹಗಲಿನಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಕೇವಲ ರಾತ್ರಿ 7 ಗಂಟೆಯಿಂದ ಬೆಳಗಿನ ಜಾವದವರೆಗೆ ಮಾತ್ರ ಕೆಲಸ ಮಾಡಬೇಕಾಗಿರುವುದು ಮತ್ತೊಂದು ತೊಂದರೆಯಾಗಿದೆ.

ಇಂತಹ ಸಂಕೀರ್ಣವಾದ ಕಾಮಗಾರಿಗಳನ್ನು ಮಾಡುವಾಗ ಸಣ್ಣಪುಟ್ಟ ಸಮಸ್ಯೆಗಳು ಬರುವುದು ಸಹಜವಾದರೂ, ಸಂಬಂಧಪಟ್ಟ ಗುತ್ತಿಗೆದಾರರು ನಿರೀಕ್ಷಿತ ಮಟ್ಟದಲ್ಲಿ ಮತ್ತು ವೇಗವಾಗಿ ಸ್ಪಂದಿಸುತ್ತಿಲ್ಲ. ಆದರೂ ಸರ್ಕಾರದ ಕಡೆಯಿಂದ ಅವರ ಬೆನ್ನೇರಿ ಕೆಲಸವನ್ನು ಮಾಡಿಸಲು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಒಂದು ವರ್ಷ ತಡವಾಗಿದ್ದು, ಇನ್ನೂ ವಿಳಂಭ ಮಾಡದೆ ಅಕ್ಟೋಬರ್ ಕೊನೆಯೊಳಗೆ ಟ್ರಯಲ್ ರನ್ ಮಾಡಬೇಕು ಎಂದು ತಾಕೀತು ಮಾಡಿದ್ದೇನೆ ಎಂದು ವಿವರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment