ದಶಕದ ನಂತರ ಮೊದಲ ಬಾರಿ ನಡೆದ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದ್ದು, `ಹೊಸ ಕಾಶ್ಮೀರ’ದ ಭರವಸೆ ನೀಡಿದ್ದ ಬಿಜೆಪಿಗೆ ಮುಖಭಂಗ ಎದುರಾಗಲಿದೆ.
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ಇದೇ ಮೊದಲ ಬಾರಿ 90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ನಡೆದಿದೆ.
ಜಮ್ಮು ಕಾಶ್ಮೀರದ 90 ಸ್ಥಾನಗಳಲ್ಲಿ ಬಹುಮತ ಪಡೆಯಲು 46 ಸ್ಥಾನಗಳ ಅಗತ್ಯವಿದ್ದು, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 48 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದರೆ, ಬಿಜೆಪಿ 28 ಸ್ಥಾನಗಳಿಗೆ ಕುಸಿದಿದೆ. 4 ಕ್ಷೇತ್ರಗಳಲ್ಲಿ ಇತರೆ ಪಕ್ಷಗಳು ಮುನ್ನಡೆ ಗಳಿಸಿವೆ.
ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ಮತ್ತು 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಗರಿಷ್ಠ 63.88ರಷ್ಟು ಮತದಾನವಾಗಿತ್ತು.
ಜಮ್ಮು ಕಾಶ್ಮೀರ ನ್ಯಾಷನಲ್ ಕ್ರಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜೊತೆಯಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದವು. ಮತ್ತೊಂದೆಡೆ ಡೆಮಾಕ್ರೆಟಿಕ್ ಪಾರ್ಟಿ ಮತ್ತು ಬಿಜೆಪಿ ಮುಖಾಮುಖಿ ಆಗಿದ್ದವು.