ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಸೇರಿದಂತೆ ನಾಲ್ವರಿಗೆ ಮುಂಬರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ.
ಕಾಂಗ್ರೆಸ್ ಬುಧವಾರ ಬಿಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿವಿ ಮೋಹನ್ ಮತ್ತು ಶಿವಣ್ಣ ಮಳವಳ್ಳಿ ಅವರಿಗೆ ಟಿಕೆಟ್ ಘೋಷಿಸಿದೆ.
ಜೂನ್ 18ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಪ್ರಕಟಿಸಲಾದ ನಾಲ್ವರು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕಾಂಗ್ರೆಸ್ ಓಬಿಸಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದೆ ಎಂದು ವಿಶ್ಲೇಷಿಸಲಾಗಿದೆ.
ಶಿವಣ್ಣ ಮಳವಳ್ಳಿ ಸಿದ್ದರಾಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರೆ, ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರ ಎಐಸಿಸಿ ಕಾರ್ಯದರ್ಶಿ ಮಂಗಳೂರಿನ ಪಿವಿ ಮೋಹನ್ ಅವರಿಗೆ ಅವಕಾಶ ನೀಡಲಾಗಿದೆ.



