Thursday, May 14, 2026
Google search engine
Homeಕಾನೂನುಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಮಹತ್ವದ ಆದೇಶ

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಮಹತ್ವದ ಆದೇಶ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಎಸ್ ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ. ಅಲ್ಲದೇ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ 10 ಸಾವಿರ ರೂ. ದಂಡ ವಿಧಿಸಿದೆ.

ಒಂದು ತಿಂಗಳ ಕಾಲ ಆದೇಶ ಅಮಾನತಿನಲ್ಲಿಡಲು ಸುಬ್ಬಾರೆಡ್ಡಿ ಪರ ವಕೀಲರು ಮನವಿ ಮಾಡಿದರು. ಆದರೆ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೇ ಮುನಿರಾಜು ಅವರನ್ನು ವಿಜಯಿ ಎಂದು ಘೋಷಿಸುವ ಮನವಿಯನ್ನು ತಿರಸ್ಕರಿಸಿತು.

ಚುನಾವಣಾ ಆಯೋಗಕ್ಕೆ ಮರುಚುನಾವಣೆ ಮಾಡುವ ಅಧಿಕಾರ ಇದೆ ಎಂದು ಇದೇ ವೇಳೆ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments