Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜ್ಯ

ಅಭಿಮಾನ್ ಸ್ಟುಡಿಯೋ ಜಾಗದಲ್ಲಿ ಸಸ್ಯೋದ್ಯಾನ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
eshwar khandre

ಬೆಂಗಳೂರು: ಖ್ಯಾತ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿದ್ದು, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸಲು ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸೌಧದಲ್ಲಿಂದು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರಿಂದ ವಿಷ್ಣುವರ್ಧನ್ ಸ್ಮಾರಕ ಕುರಿತಂತೆ ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಲಸಂದ್ರ ಗ್ರಾಮದ ಸರ್ವೆ ನಂ.26 ರಲ್ಲಿ 62 ಎಕರೆ20 ಗುಂಟೆ ಪ್ರದೇಶವನ್ನು “ತುರಹಳ್ಳಿ ರಾಜ್ಯ ಅರಣ್ಯ” ಎಂದು ಘೋಷಸಿ ಮೈಸೂರು ಸರ್ಕಾರ 1935ರಲ್ಲಿ ಅಧಿಸೂಚನೆ ಹೊರಡಿಸಿತ್ತು. 1980ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ಬರುವ ಮೊದಲು ಈ ಅರಣ್ಯ ಭೂಮಿಯ ಪೈಕಿ 20 ಎಕರೆ ಪ್ರದೇಶವನ್ನು ಖ್ಯಾತ ಚಿತ್ರನಟ ಟಿ.ಎನ್.ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಿಸುವ ಸಲುವಾಗಿ 1969 ಒಂದು ಎಕರೆಗೆ ರೂ.300/- ರಂತೆ ಒಟ್ಟು 6,000/- ರೂಗಳಿಗೆ 20 ಎಕರೆ ಪ್ರದೇಶವನ್ನು ಷರತ್ತುಬದ್ಧವಾಗಿ ಮಂಜೂರು ಮಾಡಲಾಗಿತ್ತು ಎಂದರು.

2003ರಲ್ಲಿ 10 ಎಕರೆ ಪ್ರದೇಶವನ್ನು ದಿವಂಗತ ಬಾಲಕೃಷ್ಣ ಅವರ ಮಕ್ಕಳು ಸರ್ಕಾರದಿಂದ ಪೂರ್ವಾನುಮತಿ ಪಡೆದು ಮಾರಾಟ ಮಾಡಿರುತ್ತಾರೆ. ಮಾರಾಟಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿಯೂ ಮಾರಾಟದಿಂದ ಬಂದ ಹಣದಿಂದ ಸ್ಟುಡಿಯೋ ಅಭಿವೃದ್ಧಿ ಪಡಿಸುವಂತೆ ಮತ್ತೆ ಷರತ್ತು ಹಾಕಲಾಗಿರುತ್ತದೆ. ಆದರೆ ಈವರೆಗೆ ಯಾವುದೇ ಅಭಿವೃದ್ಧಿ ಆಗಿಲ್ಲ. ಬದಲಾಗಿ ಈಗ ಉಳಿದ 10 ಎಕರೆ ಜಮೀನ್ನೂ ಮಾರಾಟ ಮಾಡಲು ಮುಂದಾಗಿರುವುದು ಷರತ್ತಿನ ಉಲ್ಲಂಘನೆಯಾಗಿದ್ದು, ಸದರಿ ಅರಣ್ಯ ಭೂಮಿಯನ್ನು ಇಲಾಖೆಗೆ ಮರಳಿಸುವಂತೆ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ಸಸ್ಯೋದ್ಯಾನ ನಿರ್ಮಾಣ:

ಬೆಂಗಳೂರು ವ್ಯಾಪಕವಾಗಿ ಬೆಳೆದಿದ್ದು, ಶ್ವಾಸತಾಣಗಳ ಅಗತ್ಯವಿದೆ. ಈ ಜಮೀನು ಇಲಾಖೆಗೆ ಮರಳಿ ಬಂದರೆ ಅಲ್ಲಿ ಒಂದು ಸಸ್ಯೋದ್ಯಾನ ನಿರ್ಮಿಸಲಾಗುವುದು ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಕಳೆದ ಮೇ 15ರಂದು ಕಂದಾಯ ಇಲಾಖೆ ವಶದಲ್ಲಿರುವ ಅರಣ್ಯ ಭೂಮಿಯನ್ನು ಯಾವುದೇ ಸಂಸ್ಥೆ, ವ್ಯಕ್ತಿಗಳಿಗೆ ಮಂಜೂರು ಮತ್ತು ಗುತ್ತಿಗೆ ನೀಡಿದ್ದರೆ, ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದ್ದರೆ, ಅದರ ಪರಿಶೀಲನೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಸೂಚಿಸಿದೆ ಎಂದೂ ತಿಳಿಸಿದರು.

ಡಾ. ವಿಷ್ಣುವರ್ಧನ್ ಅವರ ಸ್ಮಾರಕಕ್ಕೆ ಜಮೀನು ನೀಡಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ಮತ್ತು ಸರ್ಕಾರ ನಿಯಮಾನುಸಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment