ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಿದ 8 ಬಂಡಾಯ ಸ್ಪರ್ಧಿಗಳನ್ನು ಉಚ್ಚಾಟನೆ ಮಾಡಲಾಗಿದೆ.
ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರ ವಿರುದ್ಧ ಬಂಡಾಯ ಸ್ಪರ್ಧಿಗಳು ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ 8 ಮಂದಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಮಾಜಿ ಸಚಿವ ರಂಜಿತ್ ಚೌಟಾಲಾ, ಬಚನ್ ಸಿಂಗ್ ಆರ್ಯಾ, ಸಂದೀಪ್ ಗರ್ಗ್ ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ಪ್ರಮುಖರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಇವರು ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದರು.
ಕಾಂಗ್ರೆಸ್ ಕೂಡ ಬಂಡಾಯದ ಬಿಸಿ ಎದುರಿಸುತ್ತಿದ್ದು, ಸ್ಪತಂತ್ರವಾಗಿ ಕಣಕ್ಕಿಳಿದಿದ್ದ ಪಕ್ಷದ 13 ಮಂದಿಯನ್ನು ಉಚ್ಚಾಟಿಸಿತ್ತು.