Friday, November 22, 2024
Google search engine
Homeತಾಜಾ ಸುದ್ದಿರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿಗೆ ಕೋರ್ಟ್ ಸೂಚನೆ

ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿಗೆ ಕೋರ್ಟ್ ಸೂಚನೆ

ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 20 ಲಕ್ಷ ರೂ. ಠೇವಣಿ ಇರಿಸುವಂತೆ ಸೂಚಿಸಿದೆ.

ಅನುಮತಿ ಪಡೆಯದೇ ತಮ್ಮ ಬ್ಯಾನರ್ ಪರಂವಾದಲ್ಲಿ ನಿರ್ಮಿಸಲಾದ ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ ಟಿ ಮ್ಯೂಸಿಕ್ ಸಂಸ್ಥೆ ದೆಹಲಿ ಹೈಕೋರ್ಟ್ ಗೆ ದೂರು ನೀಡಿತ್ತು.

ಕಾಪಿ ರೈಟ್ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎಂಆರ್.ಟಿ ಹಕ್ಕು ಹೊಂದಿರುವ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಚಿತ್ರಗಳ ಹಾಡುಗಳನ್ನು ಬಳಸಲಾಗಿತ್ತು. ಅನುಮತಿ ಪಡೆಯದೇ ಹಾಡುಗಳನ್ನು ಬಳಸಿರುವುದಾಗಿ ರಕ್ಷಿತ್ ಶೆಟ್ಟಿ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

ರಕ್ಷಿತ್ ಶೆಟ್ಟಿ ಮತ್ತು ಪರಂವಾಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ರಕ್ಷಿತ್ ಶೆಟ್ಟಿ ಕೋರ್ಟಿಗೆ ಹಾಜರಾಗದ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದುಹಾಕಬೇಕು ಮತ್ತು 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments