Friday, December 12, 2025
Google search engine
Homeಅಪರಾಧಬೆಂಗಳೂರಿನ ಕಸದ ಲಾರಿಯಲ್ಲಿ ಮಹಿಳೆ ಶವಪತ್ತೆ; 20 ಗಂಟೆಯಲ್ಲಿ ಹಂತಕ ಅರೆಸ್ಟ್!

ಬೆಂಗಳೂರಿನ ಕಸದ ಲಾರಿಯಲ್ಲಿ ಮಹಿಳೆ ಶವಪತ್ತೆ; 20 ಗಂಟೆಯಲ್ಲಿ ಹಂತಕ ಅರೆಸ್ಟ್!

ಕಸದ ಲಾರಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಬೆಂಗಳೂರಿನ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದು, ಕೊಲೆ ಮಾಡಿದ ಅಸ್ಸಾಂ ಮೂಲದ ಗೆಳೆಯನನ್ನು ಬಂಧಿಸಿದ್ದಾರೆ.

ಹುಳಿಮಾವು ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪ ಅಲಿಯಾಸ್ ಆಶಾಳ ಶವ ಕಸದ ಲಾರಿಯಲ್ಲಿ ಪತ್ತೆಯಾಗಿತ್ತು. ಅಚ್ಚುಕಟ್ಟು ಪ್ರದೇಶದ ಪೊಲೀಸರು ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಕೊಲೆ ಆರೋಪಿ ಅಸ್ಸಾಂ ಮೂಲದ ಸಂಶುದ್ದೀನ್ ಎಂಬಾತನನ್ನು ಬಂಧಿಸಿದ್ದಾರೆ.

ಎರಡು ವರ್ಷಗಳಿಂದ ಇಬ್ಬರು ಲಿವ್ ಇನ್ ರಿಲೇಷನ್‌ನಲ್ಲಿದ್ದರು. ಕೊಲೆಯಾದ ಮಹಿಳೆ ದಿನಾಲೂ ಮನೆಗೆ ಬರುವಾಗ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು. ಜೊತೆಗೆ ತಡರಾತ್ರಿವರೆಗೂ ಫೋನ್‌ನಲ್ಲಿ ಮಾತಾಡುತ್ತಿದ್ದಳು. ಇದೇ ಕಾರಣದಿಂದ ಇಬ್ಬರ ನಡುವೆ ಜಗಳವಾಗಿತ್ತು. ಜಗಳ ಅತಿರೇಕಕ್ಕೆ ಹೋಗಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮೂಟೆಗೆ ಹಾಕಿ, ಬೈಕ್‌ನಲ್ಲಿ ತಂದು ಕಸದ ಲಾರಿಗೆ ಹಾಕಿ ಹೋಗಿದ್ದ ಎಂದು ತಿಳಿದುಬಂದಿದೆ.

ಆಶಾಗೆ ಇದಕ್ಕೂ ಮೊದಲು ಮದುವೆಯಾಗಿದ್ದು, ಗಂಡ ಮೃತಪಟ್ಟಿದ್ದ. ಆಕೆಗೆ ಇಬ್ಬರು ಮಕ್ಕಳಿದ್ದರು. ಜೊತೆಗೆ ಆರೋಪಿ ಸಂಶುದ್ದೀನ್‌ಗೆ ಮದುವೆಯಾಗಿ ಹೆಂಡತಿ ಹಾಗೂ ಇಬ್ಬರು ಮಕ್ಕಳು ಅಸ್ಸಾಂನಲ್ಲಿದ್ದರು. ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಪರಸ್ಪರ ಪರಿಚಯ ಆಗಿತ್ತು ಎಂದು ಹೇಳಲಾಗಿದೆ.

ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿತ್ತು.

ಭಾನುವಾರ ರಾತ್ರಿ 1:40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು.

ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಆಧರಿಸಿ 20 ಗಂಟೆಯಲ್ಲಿ ಹಂತಕನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments