Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಪತ್ನಿಗೆ ವಂಚಿಸಿದ್ದ 14 ಲಕ್ಷ ರೂ.  ಹಣ ವಾಪಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
k sudhakar wife digital arrest

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್ ಮಾಡಿ 14 ಲಕ್ಷ ರೂ. ವಂಚಿಸಿದ್ದ ಹಣವನ್ನು ಸೈಬರ್ ಪೊಲೀಸರು ಸಂಪೂರ್ಣ ವಸೂಲು ಮಾಡಿದ್ದಾರೆ.

ಆಗಸ್ಟ್ 26ರಂದು ಬೆಂಗಳೂರಿನ ಪಶ್ಚಿಮ ಸೈಬರ್ ಠಾಣೆಗೆ ಸಂಸದ ಕೆ.ಸುಧಾಕರ್ ಪತ್ನಿ ಡಾ.ಪ್ರಿಯಾ ತಮಗೆ ಡಿಜಿಟಲ್ ಅರೆಸ್ಟ್ ಮಾಡಿದ ಸೈಬರ್ ವಂಚಕರು 14 ಲಕ್ಷ ರೂ. ವಸೂಲು ಮಾಡಿದ್ದಾರೆ ಎಂದು ದೂರು ನೀಡಿದ್ದರು.

ಡಿಜಿಟಲ್ ಅರೆಸ್ಟ್ ಆಗಿ 14 ಲಕ್ಷ ರೂ. ಕಳೆದುಕೊಂಡ ಬೆನ್ನಲ್ಲೇ ಡಾ.ಪ್ರಿಯಾ 1930 ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದರು. ಗೋಲ್ಡನ್ ಅವರ್​ನಲ್ಲಿ ದೂರು‌ ನೀಡಿದ್ದರಿಂದ 14 ಲಕ್ಷ ರೂ ಹಣ ಕೂಡ ವಾಪಸ್ ಬಂದಿದೆ.

ಡಾ.ಪ್ರಿಯಾ ಅವರಿಗೆ ಆಗಸ್ಟ್ 26ರಂದು ಕರೆ ಮಾಡಿದ್ದ ಸೈಬರ್ ವಂಚಕರು ನಾವು ಮುಂಬೈ ಸೈಬರ್​ ಡಿಪಾರ್ಟ್ಮೆಂಟ್ ಸಿಬ್ಬಂದಿ ಎಂದು ಹೇಳಿಕೊಂಡು ಡಿಜಿಟಲ್ ಅರೆಸ್ಟ್ ಮಾಡಿ 14 ಲಕ್ಷ ರೂ. ವಂಚಿಸಿದ್ದರು.

ಅಪರಿಚಿತ ವ್ಯಕ್ತಿಯೊಬ್ಬ ನಿಮ್ಮ ದಾಖಲೆಗಳನ್ನು ಬಳಸಿಕೊಂಡಿದ್ದಾರೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾನೆ ಎಂದು ಸೈಬರ್​​ ವಂಚಕರು ಕಥೆ ಕಟ್ಟಿದ್ದಾರೆ.

ವಂಚನೆಗೆ ಒಳಗಾಗಿರುವುದು ಗೊತ್ತಾಗುತ್ತಿದ್ದಂತೆ ರಾಷ್ಟ್ರೀಯ ಸೈಬರ್ ಸಹಾಯವಾಣಿ 1930ನಲ್ಲಿ ಡಾ. ಪ್ರಿಯಾ ದೂರು ದಾಖಲಿಸಿದ್ದರು. ಇದರಿಂದ ತಕ್ಷಣ ಹಣ ವರ್ಗಾವಣೆಯಾಗಿದ್ದ ಅಕೌಂಟ್ ಫ್ರೀಜ್ ಆಗಿದೆ. ಬಳಿಕ ಹಣ ವಾಪಸ್​ ಗೆ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.

ಸೆ.3ರಂದು ಹಣ ವಾಪಸ್ ಮಾಡಲು ಸಂಬಂಧ ಬ್ಯಾಂಕ್​ಗೆ ಕೋರ್ಟ್ ಆದೇಶಿಸಿದೆ. ಇದರಿಂದ ಸಂಪೂರ್ಣ 14 ಲಕ್ಷ ರೂ. ಹಣ ಕೂಡ ವಾಪಸ್ ಬಂದಿದೆ. ಸದ್ಯ ಸೈಬರ್​ ವಂಚಕರ ಜಾಲ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment