Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

KEA ವೈದ್ಯಕೀಯ ಸೀಟಿಗೆ ನಕಲಿ ದಾಖಲೆ ನೀಡಿ ಸಿಕ್ಕಿಬಿದ್ದ 21 ಮಂದಿ ಅಭ್ಯರ್ಥಿಗಳು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
doctors

ಬೆಂಗಳೂರು: ವೈದ್ಯಕೀಯ ಸೀಟಿಗಾಗಿ ನಕಲಿ ದಾಖಲೆ ನೀಡಿ ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದ 21 ಮಂದಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಮಲ್ಲೇಶ್ವರಂ ಪೊಲೀಸರಿಗೆ ದೂರು ನೀಡಿದೆ.

ವೈದ್ಯಕೀಯ ಸೀಟು ಪಡೆಯಲು ಅನ್ಯಮಾರ್ಗ ಹಿಡಿದಿದ್ದ 21 ಮಂದಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ,2025 ನೇ ಸಾಲಿನ ಯುಜಿಸಿಇಟಿ ಮತ್ತು ಯುಜಿ ನೀಟ್ ಸೀಟು ಕೋರಿ 21 ಅಭ್ಯರ್ಥಿಗಳು ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದರು.

ಆರಂಭದಲ್ಲಿ ಅರ್ಜಿ ಹಾಕದೆ, ಅರ್ಜಿ ತಿದ್ದುಪಡಿ ಮೂಲಕ ಪಿಹೆಚ್ ಮೀಸಲಾತಿ ಕೋರಿದ್ದಾರೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಅನುಮಾನ ಬಂದಿದೆ. ಕಿವಿ ಕೇಳಿಸಲ್ಲ ಎಂದು ಅರ್ಜಿ ಹಾಕಿದ್ದ 21 ಮಂದಿಯನ್ನ ನಿಯಾಮವಳಿಗಳ ಪ್ರಕಾರ ವಿಕ್ಟೋರಿಯಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇಲ್ಲಿಂದ ಆಡಿಯೋ ಗ್ರಾಂ ಮತ್ತು ಅಂಗವಿಕಲತೆಯ ಪರೀಕ್ಷೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿತ್ತು.

ವೈದ್ಯಕೀಯ ಪರೀಕ್ಷೆಯಲ್ಲಿ ಅಕ್ರಮ ಸಾಬೀತಾಗಿದ್ದು, ನಕಲಿ ಅಂಗವಿಕಲ ಪ್ರಮಾಣ ಪತ್ರವನ್ನು ಸಲ್ಲಿಸಿರುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಕೂಡಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಅಭ್ಯರ್ಥಿಗಳು ಮೆಡಿಕಲ್ ಬೋರ್ಡ್ ಚೇರ್ಮನ್ ನಕಲಿ ಸಹಿ, ಸೀಲ್ ಬಳಸಿ ನಕಲಿ ಅಂಗವಿಕಲ ವೈದ್ಯಕೀಯ ಪ್ರಮಾಣ ಪತ್ರವನ್ನ ಸಲ್ಲಿಸಿದ್ದರು. ಇದರ ಜೊತೆಗೆ ಯುಡಿ ಐಡಿ ಕಾರ್ಡ್ ನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಿಂದ ಪ್ರಮಾಣ ಪತ್ರವನ್ನ ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳನ್ನ ತಂದು ಹಾಜರುಪಡಿಸುವಂತೆ ನೋಟಿಸ್ ನೀಡಲಾಗಿತ್ತು. ಈ ವೇಳೆಯೂ ಅಕ್ರಮ ಪತ್ತೆಯಾಗಿದೆ. ನಿಮ್ಹಾನ್ಸ್ ಆಸ್ಪತ್ರೆಯಿಂದ ಮೆಡಿಕಲ್ ಸರ್ಟಿಫಿಕೇಟ್ ಕೊಟ್ಟಿದ್ದಾರೆಂದು ನೀಡಿದ ಸರ್ಟಿಫಿಕೇಟ್ ಕೂಡ ನಕಲಿ ಎನ್ನುವುದು ಬೆಳಕಿಗೆ ಬಂದಿದೆ.

21 ಜನರನ್ನೊಳಗೊಂಡು ಇನ್ನೂ ಐವರನ್ನು ಈ ಪಟ್ಟಿಗೆ ಸೇರಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಠಾಣೆಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment