ಬಾಲಕಿಯೊಬ್ಬಳ ಮೇಲೆ ನಿರಂತರ ಅತ್ಯಾಚಾರಗೈದ 6 ಮಂದಿಯ ಪೈಕಿ ಮೂವರನ್ನು ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸರು ಬಂಧಿಸಿದ್ದಾರೆ.
ರಾಹುಲ್, ನಾಗೇಶ್ ಹಾಗೂ ಪುನೀತ್ ಎಂಬುವವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರ ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಬಾಲಕಿ ನೀಡಿದ ಹೇಳಿಕೆ ಆಧರಿಸಿ 6 ಜನರ ವಿರುದ್ದ ಜುಲೈ18 ರಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


