Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಮಂಗಳೂರಿನಲ್ಲಿ 9 ಮದುವೆ ಆದ ಭೂಪ: ಮದುವೆ ಆಗಿ ಮೋಸ ಮಾಡೋದೇ ಇವರ ಕಾಯಕ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 34 ವೀಕ್ಷಣೆಗಳು

ಮಂಗಳೂರು: ಮ್ಯಾಟ್ರೊಮೊನಿಯೊದಲ್ಲಿ ಪರಿಚಯ ಮಾಡಿಕೊಂಡು ಮದುವೆ ಆಗುವ ನೆಪದಲ್ಲಿ ಯುವತಿಯಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿ ಹಾಗೂ ನಕಲಿ ಮಾವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ವಂಚಿಸುತ್ತಿದ್ದ ಸುಶಾಂತ್ ಪೂಜಾರಿ ಮತ್ತು ಮಾವ ಎಂದು ಹೇಳಿಕೊಂಡು ಮದುವೆಗೆ ಸಹಕರಿಸಿದ್ದ ಭಾಸ್ಕರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಮೂಲ್ಕಿ ನಿವಾಸಿಯಾಗಿರುವ ಸುಶಾಂತ್‌ ಪೂಜಾರಿ ಮಹಾರಾಷ್ಟ್ರದಲ್ಲಿ ಇಬ್ಬರು ಹಾಗೂ ಉಡುಪಿಯ ಇಬ್ಬರು ಹಾಗೂ ಬೆಂಗಳೂರಿನ ಇಬ್ಬರು ಸೇರಿದಂತೆ 9 ಯುವತಿಯನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ.

ಮಹಿಳೆಯೊಬ್ಬರಿಗೆ ಸುಶಾಂತ್ ಪೂಜಾರಿ ಆನ್ಲೈನ್ ಮದುವೆ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈನಲ್ಲಿ 2025 ಫೆ. 2 ರಂದು ಮದುವೆಯಾಗಿದ್ದರು. ಈ ಮಹಿಳೆಯನ್ನು ನಂಬಿಸಿ ಸುಶಾಂತ್ ಪೂಜಾರಿ ಹಂತ ಹಂತವಾಗಿ 6.60 ಲಕ್ಷ ರೂ. ಹಣ ಪಡೆದು ವಂಚಿಸಿದ್ದ. ಈತ ಇದೇ ರೀತಿ ೯ ಮದುವೆ ಆಗಿ ವಂಚಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

2025ರ ನವೆಂಬರ್ 15 ರಿಂದ ನಾಪತ್ತೆಯಾಗಿದ್ದ ಸುಶಾಂತ್‌ ಪೂಜಾರಿ ಬಗ್ಗೆ ಬಗ್ಗೆ ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಹಲವು ಕಡೆಗಳಲ್ಲಿ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ವಂಚಿಸಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದಿದೆ. ಹೀಗಾಗಿ ನೊಂದ ಮಹಿಳೆಯು ಕಾವೂರು ಪೊಲೀಸ್ ಠಾಣೆಯಲ್ಲಿ ಆತನ ವಿರುದ್ದ ದೂರು ನೀಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು, ಆರೋಪಿತ ಸುಶಾಂತ್ ಪೂಜಾರಿ ಯಾನೆ ಸುಶಾಂತ್ ಅಂಕುಶ್ ಪೂಜಾರಿ ಯಾನೆ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ಫೆ. 5 ರಂದು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಆರೋಪಿ ಆನ್​ಲೈನ್ ಮದುವೆ ಪ್ಲಾಟ್​ಫಾರಂ ಮೂಲಕ ಪರಿಚಯ ಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುವುದು ತಿಳಿದುಬಂದಿದೆ.

ಉಡುಪಿ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿದ್ದು, ಮುಂಬೈನ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುವುದು ತಿಳಿದುಬಂದಿದೆ. ಅದೇ ರೀತಿ ಬೆಂಗಳೂರಿನಲ್ಲೂ ಇಬ್ಬರು ಯುವತಿಗೆ ಮಂಕುಬೂದಿ ಎರಚಿ ಮೋಸ ಮಾಡಿದ್ದಾನೆ.

ಕಾರ್ಕಳದ ಓರ್ವ ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment