ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಹೊರರಾಜ್ಯದ ಮೂರು ವಿಷಯಗಳಲ್ಲಿ ಪದವೀಧರನಾಗಿದ್ದ ಕುಖ್ಯಾತ ಕನ್ನಗಳ್ಳನನ್ನು ಬಂಧಿಸಿರುವ ಅನ್ನಪೂರ್ಣೇಶ್ವರಿನಗರ ಪೊಲೀಸರು 1.36 ಕೋಟಿ ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ಉತ್ತರಪ್ರದೇಶದ ಮುರ್ದಾಬಾದ್ ಜಿಲ್ಲೆಯ ಯೀಮ್ ಅಲಿಯಾಸ್ ಎಟಿಎಂ (38) ಬಂಧಿತ ಆರೋಪಿ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಬಂಧಿತ ಆರೋಪಿ ಸರಣಿ ಕಳ್ಳತನ ಮಾಡುತ್ತಿದ್ದ ಎಟಿಎಂನಿಂದ 1.36 ಕೋಟಿ ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕರ್ನಾಟಕ ಸೇರಿದಂತೆ ಉತ್ತರ ಪ್ರದೇಶ, ಆಂಧ್ರಪ್ರದೇಶ ಮುಂತಾದ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 65 ಪ್ರಕರಣಗಳಿವೆ. ಈ ಮೊದಲು ಸುಫಾರಿ ಕಿಲ್ಲರ್ ಆಗಿದ್ದ ಈತ ನಂತರದ ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಸುಲಿಗೆ, ಮನೆಗಳ್ಳತನ ಮಾಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದರು.
ಅನ್ನಪೂರ್ಣೇಶ್ವರಿನಗರದ ಆರೋಗ್ಯ ಬಡಾವಣೆಯ ಪ್ರಸನ್ನ ಕುಮಾರ್ ಕುಟುಂಬ ಸಮೇತ ಕಳೆದ ಆ.19 ರಂದು ಮಧ್ಯಾಹ್ನ ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿ ಮತ್ತೆ ಸಂಜೆ ವಾಪಸ್ ಬಂದು ನೋಡಿದಾಗ ಮುಂಭಾಗಿಲ ಡೋರ್ ಲಾಕ್ ಮೀಟಿ ಒಳನುಗ್ಗಿ ಕೊಠಡಿಯಲ್ಲಿನ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ, ಬೆಳ್ಳಿಯ ವಸ್ತುಗಳನ್ನು ಕಳವು ಮಾಡಲಾಗಿತ್ತು.
ಪ್ರಸನ್ನ ಕುಮಾರ್ ನೀಡಿದ ದೂರು ಆಧರಿಸಿ ಅನ್ನಪೂರ್ಣೇಶ್ವರಿನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡರು ಸಹ ಆರೋಪಿಯ ಸುಳಿವು ದೊರೆತ್ತಿರುವುದಿಲ್ಲ. ತನಿಖೆಯನ್ನು ಮುಂದುವರೆಸಿ ಖಚಿತವಾದ ಮಾಹಿತಿಯನ್ನು ಕಲೆಹಾಕಿ ಬೆರಳಚ್ಚು ಆಧಾರದ ಮೇಲೆ ಕಳೆದ ನ.9 ರಂದು ಓರ್ವ ವ್ಯಕ್ತಿಯನ್ನು ಉತ್ತರ ಪ್ರದೇಶದ ಮುರಾದಾಬಾದ್‌ನ ಜಿಲ್ಲಾ ಕಾರಾಗೃಹದಿಂದ ಬಾಡಿ ವಾರೆಂಟ್ ಮೇಲೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಚಿನ್ನಾಭರಣಗಳನ್ನು ಕಳವು ಮಾಡಿರುವುದಾಗಿ ತಪ್ಪೋಪ್ಪಿಕೊಂಡು ನಗರದಲ್ಲಿ ವಿವಿಧ ಕಡೆಗಳಲ್ಲಿ ಕನ್ನ ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದಾನೆ.
ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ವಶಕ್ಕೆ ತೆಗೆದುಕೊಂಡು ಸುದೀರ್ಘ ವಿಚಾರಣೆ ನಡೆಸಿದಾಗ ಕನ್ನ ಕಳವು ಮಾಡಿದ್ದ ಚಿನ್ನಾಭರಣಗಳನ್ನು ಉತ್ತರ ಪ್ರದೇಶದ ವಿವಿಧ ಗಿರವಿ ಅಂಗಡಿಗಳಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ.
ಅದರಂತೆ ಕಳೆದ ನ.14 ರಂದು ಮುಂಬೈನ ಜವಾರಿ ಬಜಾರ್‌ನ ಗಿರವಿ ಅಂಗಡಿಯ ಮಾಲೀಕನಿಗೆ ಮಾರಾಟ ಮಾಡಿದ್ದ, 501 ಗ್ರಾಂ ಚಿನ್ನಾಭರಣಗಳು ಹಾಗೂ ಅದೇ ದಿನ ಜವಾರಿ ಬಜಾರ್‌ನ ಮತ್ತೊಂದು ಗಿರವಿ ಅಂಗಡಿಯಿಂದ 160 ಗ್ರಾಂ ಚಿನ್ನಾ‘ರಣಗಳನ್ನು ಜಪ್ತಿ ಮಾಡಲಾಗಿದೆ.
ಇದಲ್ಲದೆ ನ.18 ರಂದು ಗುರುಗಾವ್‌ನ ಗಿರವಿ ಅಂಗಡಿಯೊಂದರಿಂದ 130 ಗ್ರಾಂ ಚಿನ್ನಾ‘ರಣಗಳನ್ನು ನ.21 ರಂದು ಸಂ‘ಲ್ ಜಿಲ್ಲೆಯ ಗಿರವಿ ಅಂಗಡಿಯೊಂದರಿಂದ 662 ಗ್ರಾಂ ಚಿನ್ನಾ‘ರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಆರೋಪಿಯ ಬಂಧನದಿಂದ ಅನ್ನಪೂರ್ಣೇಶ್ವರಿ ನಗರ-6 ಕೆಂಗೇರಿ, ಜ್ಞಾನಭಾರತಿ, ಆರ್.ಎಂಸಿ. ಯಾರ್ಡ್, ಪೀಣ್ಯ, ಬಾಣಾಸವಾಡಿ ಪೊಲೀಸ್ ಠಾಣೆಯ ತಲಾ ಒಂದು ಸೇರಿ 11 ಕನ್ನ ಕಳವು ಪ್ರಕರಣಗಳು ಪತ್ತೆಹಚ್ಚಲಾಗಿದೆ ಎಂದು ಹೇಳಿದರು.
ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್.ಎಸ್, ಎಸಿಪಿ ಬಸವರಾಜ ಎ ತೇಲಿ ಅವರ ಮಾರ್ಗದರ್ಶನದಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ಎ.ವಿ.ನೇತೃತ್ವದ ಸಿಬ್ಬಂದಿ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.