ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿದ ಘಟನೆ ಹಾಸನದಲ್ಲಿ ನಡೆದಿದೆ.
ನಗರದಲ್ಲಿ ಹಾರ್ಡ್ ವೇರ್ ಮತ್ತು ಪ್ಲೇವುಡ್ ಅಂಗಡಿ ನಡೆಸುತ್ತಿದ್ದ ಮನು ಕುಮಾರ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನುಕುಮಾರ್ ಮತ್ತು ಭವಾನಿ ಒಂದೇ ಕಾಲೇಜಿನಲ್ಲಿ ಓದುತ್ತಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಮನಸ್ತಾಪದಿಂದ ಬೇರ್ಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮನು ಕುಮಾರ್ ಮಂಗಳವಾರ ಸ್ನೇಹಿತರ ಜೊತೆ ಹೊಸ ವರ್ಷ ಆಚರಿಸಲು ಖಾಸಗಿ ಹೋಟೆಲ್ ನಲ್ಲಿ ಪಾರ್ಟಿಗೆ ತೆರಳಿದ್ದರು. ಈ ವೇಳೆ ಭವಾನಿ ಪದೇಪದೆ ಫೋನ್ ಮಾಡಿದರೂ ಮನುಕುಮಾರ್ ಸ್ವೀಕರಿಸಿಲ್ಲ.
ಮನುಕುಮಾರ್ ಫೋನ್ ರಿಸೀವ್ ಮಾಡಿಲ್ಲ ಎಂದು ಸಿಟ್ಟಿಗೆದ್ದ ಭವಾನಿ ಪಾರ್ಟಿ ನಡೆಯುತ್ತಿದ್ದ ಹೋಟೆಲ್ ಗೆ ಅಲ್ಲೇ ಬಿದ್ದಿದ್ದ ಪಾಸ್ ತೆಗೆದುಕೊಂಡು ಬಂದು ಪ್ರಶ್ನೆ ಮಾಡಿದ್ದಾಳೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಆಗಿದ್ದು, ಸಿಟ್ಟಿಗೆದ್ದ ಭವಾನಿ ಚಾಕುವಿನಿಂದ ಮನುಕುಮಾರ್ ಗೆ ಇರಿದಿದ್ದಳೆ.
ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ತಿಳಿದು ಬಂದಿದೆ.