Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಹೆತ್ತವರ ಜೊತೆಗೂಡಿ ತಮ್ಮನನ್ನೇ ಬೆಂಕಿ ಹಚ್ಚಿ ಕೊಂದ ಯೋಧ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
bagalkot news

ಬಾಗಲಕೋಟೆ: ಕುಡಿದು ಬಂದು ಹೆತ್ತವರಿಗೆ ಕಿರುಕುಳ ನೀಡುತ್ತಿದ್ದ ಕುಡುಕ ಸಹೋದರನನ್ನು ತಂದೆ-ತಾಯಿ ಜೊತೆಗೂಡಿ ಬೆಂಕಿ ಹಚ್ಚಿ ಯೋಧ ಕೊಲೆ ಮಾಡಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಡೀಸೆಲ್ ಸುರಿದು ಬೆಂಕಿ ಹಚ್ಚಿ ಅನಿಲ್ ಪರಪ್ಪ ಕಾನಟ್ಟಿ (32)ಯನ್ನುಕೊಲೆ ಮಾಡಲಾಗಿದೆ.

ಕುಡಿದ ಅಮಲಿನಲ್ಲಿ ನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದರಿಂದ ರೊಚ್ಚಿಗೆದ್ದು ಸಹೋದರ ಯೋಧ ಬಸವರಾಜ ಕಾನಟ್ಟಿ, ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಸೇರಿ ಮೂವರು ಕೊಲೆ ಮಾಡಿದ್ದಾರೆ.

ಕೊಲೆ ಪ್ರಕರಣಕ್ಕೆ ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಮತ್ತು ಸೋದರ ಬಸವರಾಜ ಕಾನಟ್ಟಿ ಬಂಧಿಸಿರುವ ಸಾವಳಗಿ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಕೊಲೆಯಾದ ಅನಿಲ್ ದುಶ್ಚಟಕ್ಕೆ ದಾಸನಾಗಿದ್ದ. ಆನ್​ ಲೈನ್​ ಬೆಟ್ಟಿಂಗ್, ಕುಡಿತ, ಮೋಜು ಮಸ್ತಿಗಾಗಿ 20 ಲಕ್ಷ ರೂ ಸಾಲ ಮಾಡಿದ್ದ. ಕುಟುಂಬ ಆತನ ಸಾಲ ಕೂಡ ತೀರಿಸಿತ್ತು. ಬಳಿಕ ಮತ್ತೆ 5 ಲಕ್ಷ ರೂ ಹಣ ಕೇಳುತ್ತಿದ್ದ. ತನ್ನ ಪಾಲಿನ ಆಸ್ತಿ ನೀಡುವಂತೆ ನಿತ್ಯ ಜಗಳ ಮಾಡುತ್ತಿದ್ದನು.

ಒಂದು ವೇಳೆ ಆಸ್ತಿ ಕೊಟ್ಟರೆ ಅದನ್ನು ಮಾರಾಟ ಮಾಡುತ್ತಾನೆ ಎಂದು ಕೊಟ್ಟಿರಲಿಲ್ಲ. ಆತನ ಮದುವೆ ಮಾಡಿ ನಂತರ ಆಸ್ತಿ ಕೊಡಲು ತಂದೆ-ತಾಯಿ ಹಾಗೂ ಸಹೋದರ ಮುಂದಾಗಿದ್ದರು. ಆದರೆ ಅನಿಲ್​ ನಿತ್ಯ ಕಾಟ ಕೊಡುವುದು, ಜಗಳ ಮಾಡುವುದು ಮಾತ್ರ ತಪ್ಪಿರಲಿಲ್ಲ. ಕೊಲೆಯಾಗುವ ದಿನದಂದು ಕೂಡ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದ.

ಅನಿಲ್​​ನ ಸಹೋದರ ಬಸವರಾಜ ಕಾನಟ್ಟಿ ಓರ್ವ ಯೋಧ. ರಜೆಗೆ ಊರಿಗೆ ಬಂದಿದ್ದ. ಆತನ ಜೊತೆಗೂ ಜಗಳ ಮಾಡಿದ್ದಾನೆ. ನನ್ನ ಆಸ್ತಿ ಕೊಡದಿದ್ದರೆ ನಿಮ್ಮನ್ನು ಸಾಯಿಸುತ್ತೇನೆ ಎಂದು ಕೈಗೆ ಸಿಕ್ಕ ವಸ್ತುಗಳಿಂದ ತಂದೆ-ತಾಯಿ ಮತ್ತು ಸಹೋದರನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಪರಿಸ್ಥಿತಿ ಕೈ ಮೀರಿದಾಗ ಕಳೆದ ಸೆಪ್ಟೆಂಬರ್ 5 ರಂದು ಅನಿಲ್​​​​​ನ ಕೈ, ಕಾಲಿಗೆ ಹಗ್ಗ ಕಟ್ಟಿ ಕೊಲೆ ಮಾಡಿದ್ದಾರೆ. ನಂತರ ಡೀಸೆಲ್ ಹಾಕಿ ಸುಟ್ಟಿದ್ದಾರೆ. ಸಾವಳಗಿ ಪೊಲೀಸರು ಪ್ರಕರಣ ದಾಖಲಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment