Tuesday, 17 November 2026 — Kannadavahini
BREAKING NEWS
ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್
ಅಪರಾಧ

ಮಾಟ ಮಂತ್ರ ಹೆಸರಿನಲ್ಲಿ ವಂಚಿಸುತ್ತಾ 30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
davanagere news

ದಾವಣಗೆರೆ: ಮಾಟ-ಮಂತ್ರದ ಹೆಸರಿನಲ್ಲಿ ನಂಬಿಸಿ ಬಂಗಾರ ದೋಚಿ, ಬರೋಬ್ಬರಿ ಮೂರು ದಶಕಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಎಲ್‌ಪಿಆರ್ ಪ್ರಕರಣದ ಆರೋಪಿಯನ್ನು ಹರಿಹರ ಗ್ರಾಮಾಂತರ ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ಹಿನ್ನೆಲೆ:

1993 ರ ಅಕ್ಟೋಬರ್ 1 ರಂದು ಹರಿಹರದ ಬಜಾರ್ ಮೊಹಲ್ಲಾದ ಅಬ್ದೂಲ್ ಜಬ್ಬಾರ್ ಎಂಬುವವರ ಮನೆಗೆ ಬಂದಿದ್ದ ಆರೋಪಿ ಅಕ್ಬರ್ ಬಿನ್ ಖಾಸಿಂ ಸಾಬ್, ತನಗೆ ದೈವದ ಶಕ್ತಿ ಇದೆ ಎಂದು ನಂಬಿಸಿದ್ದನು. “ನಿಮ್ಮ ಮನೆಯಲ್ಲಿ ಪೂಜೆ ಮಾಡಿದರೆ ಕಷ್ಟಗಳು ದೂರಾಗುತ್ತವೆ. ಒಡವೆಗಳನ್ನು ಪೆಟ್ಟಿಗೆಯಲ್ಲಿಟ್ಟು ಪೂಜಿಸಿದರೆ ಅವು ಡಬಲ್ ಆಗುತ್ತವೆ” ಎಂದು ನಂಬಿಸಿ, ದೂರುದಾರರ ಮತ್ತು ಅವರ ಪತ್ನಿಯ ಮೈಮೇಲಿದ್ದ ಸುಮಾರು 7 ಗ್ರಾಂ ಚಿನ್ನಾಭರಣಗಳನ್ನು ಪೆಟ್ಟಿಗೆಯಲ್ಲಿ ಹಾಕಿಸಿದ್ದ. ಬಳಿಕ ಕುಡಿಯಲು ನೀರು ತರಲು ಕಳುಹಿಸಿ, ಪೆಟ್ಟಿಗೆಯೊಂದಿಗೆ ಪರಾರಿಯಾಗಿದ್ದನು.

ಈ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಅಂದಿನ ಪೊಲೀಸರು ಈತನನ್ನು ದಸ್ತಗಿರಿ ಮಾಡಿ ಕೆಲವು ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆದರೆ, 1995 ರಿಂದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ನಾಪತ್ತೆಯಾಗಿದ್ದನು. ಇದರಿಂದಾಗಿ 1997 ರಲ್ಲಿ ನ್ಯಾಯಾಲಯವು ಈತನನ್ನು ಎಲ್‌ಪಿಆರ್ ಆರೋಪಿ ಎಂದು ಘೋಷಿಸಿತ್ತು.

ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಅಕ್ಬರ್ ಬೆಂಗಳೂರು, ಹೊನ್ನಾಳಿ, ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದನು. ಇತ್ತೀಚೆಗೆ ಹರಿಹರಕ್ಕೆ ವಾಪಸ್ ಬಂದಿದ್ದ ಖಚಿತ ಮಾಹಿತಿ ಮೇರೆಗೆ, ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಜನವರಿ 28, 2026 ರಂದು ಈತನನ್ನು ಬಂಧಿಸಿದೆ.

ಕಾರ್ಯಾಚರಣೆ ತಂಡ:

ದಾವಣಗೆರೆ ಗ್ರಾಮಾಂತರ ಉಪವಿಭಾಗದ ಡಿವೈಎಸ್‌ಪಿ ಬಿ.ಎಸ್. ಬಸವರಾಜ ಮತ್ತು ಸಿಪಿಐ ಸುರೇಶ ಸಗರಿ ನೇತೃತ್ವದಲ್ಲಿ, ಪಿಎಸ್‌ಐಗಳಾದ ಯುವರಾಜ ಕಂಬಳಿ, ಮಂಜುಳಾ ಡಿ ಮತ್ತು ಸಿಬ್ಬಂದಿಗಳಾದ ರಾಜಶೇಖರಯ್ಯ, ಪ್ರಸನ್ನಕಾಂತ ಹಾಗೂ ಷಣ್ಮುಖಪ್ಪ ಅವರನ್ನೊಳಗೊಂಡ ತಂಡವು ಯಶಸ್ವಿ ಕಾರ್ಯಾಚರಣೆ ನಡೆಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8421 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment