Monday, May 11, 2026
Home ಅಪರಾಧ ಅರುಣ್ ಪುತ್ತಿಲ ಗಡೀಪಾರು; ಪ್ರಭಾಕರ್ ಕಲ್ಲಡ್ಕ ಸೇರಿ 17 ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐಆರ್!

ಅರುಣ್ ಪುತ್ತಿಲ ಗಡೀಪಾರು; ಪ್ರಭಾಕರ್ ಕಲ್ಲಡ್ಕ ಸೇರಿ 17 ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐಆರ್!

by Vahini
0 comments
kalladka prabhakr bhat

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಹಾಗೂ ಸೇಡು-ದ್ವೇಷ ಭಾವನೆ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡಲಾಗಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 17 ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಅರುಣ್ ಪುತ್ತಿಲನನ್ನು ಕಲಬುರಗಿಗೆ ಗಡೀಪಾರು ಮಾಡಿ ಜಿಲ್ಲಾ ಪೊಲೀಸರು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 17 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ.

ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ಬಿಎನ್​ಎಸ್​​ 353(2)ರಡಿ FIR ದಾಖಲಾಗಿದೆ.

ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ದೂರಿನ ಹಿನ್ನೆಲೆಯಲ್ಲಿ 15 ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಪ್ರಮೋದ್ ರೈ ನಂದುಗುರಿ, ತಿಲಕ್​ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್​ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್​ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅರುಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ರಾತ್ರೋರಾತ್ರಿ ಕಡಬ ತಾಲೂಕಿನ ವಿಹೆಚ್​ಪಿ ಸಂಘಟನೆ ಮುಖಂಡರ ಮನೆಗಳಿಗೆ ಭೇಟಿ ನೀಡಿ, ಜಿಪಿಎಸ್ ಫೋಟೋ ತೆಗೆದು ಸಂಘಟನೆ ಮುಖಂಡರ ಮಾಹಿತಿ ಸಂಗ್ರಹಿಸುವ ಮೂಲಕ ಎಲ್ಲರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign