Home ಅಪರಾಧ Bealagavi Session: ರಾಜ್ಯದಲ್ಲಿ 11,000 ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್

Bealagavi Session: ರಾಜ್ಯದಲ್ಲಿ 11,000 ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್

ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

by Editor
0 comments
G.parameshwar

ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಪ್ರಸ್ತುತ ವರ್ಷ ದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ ಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು.

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್‌ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್‌ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದರು.

ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ “ಡಿಜಿಟಲ್ ಅರಸ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕೈಗೊಳ್ಳಲಾಗುತ್ತಿದೆ. ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

banner

ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣ ಗಳು ದಿನೇ ದಿನೇ ಅಧಿಕಾವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42000 ಪ್ರಕರಣ ದಾಖಲಾಗಿದ್ದು ರಾಜ್ಯದಲ್ಲಿ 11000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930 ಗೆ ಮಾಹಿತಿ ನೀಡುವಂತೆ ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
22,000 ಕೋಟಿ ವೆಚ್ಚದಲ್ಲಿ Su-30 ಫೈಟರ್ ಜೆಟ್ಸ್, ಕೆ-9 ಹೌಥಿಜೆರ್ಸ್ ಖರೀದಿಗೆ ಕೇಂದ್ರ ಸಂಪುಟ ಅಸ್ತು! Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ! 18 ವರ್ಷದ ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್! ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ! ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು! ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್ BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ! ಧಾರ್ಮಿಕ ಸ್ಥಳ ಕಾಯ್ದೆ ವಿಚಾರಣೆ ಮುಗಿಯದೇ ಹೊಸ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್ ಬೆಂಗಳೂರು: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಸುಮ್ಮ ಸುಮ್ಮನೆ ನಾವು ಲಾಟಿ ಚಾರ್ಜ್ ಮಾಡಿಲ್ಲ: ಸಚಿವ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಗರಂ