ಬೆಂಗಳೂರು: ಸಿಎಂ ಮತ್ತು ಡಿಸಿಎಂ ಸೇರಿದಂತೆ ಪ್ರಮುಖ ರಾಜಕಾರಣಿಗಳು ಪರಿಚಯ ಎಂದು ಹೇಳಿಕೊಂಡು ಸುಮಾರು 20 ಜನರಿಗೆ 30 ಕೋಟಿ ರೂ. ವಂಚಿಸಿದ್ದ ಮಹಿಳೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸವಿತಾ ಎಂಬ ಮಹಿಳೆಯನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಕಿಟ್ಟಿ ಪಾರ್ಟಿಗಳಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಸಿಎಂ, ಡಿಸಿಎಂ, ಎಂಬಿ ಪಾಟೀಲ್ ಸೇರಿದಂತೆ ಹಲವು ಪ್ರಭಾವಿ ರಾಜಕಾರಣಿಗಳು ನನಗೆ ಪರಿಚಯ ಎಂದು ನಂಬಿಸಿ ವಿಶ್ವಾಸಕ್ಕೆ ಪಡೆಯುತ್ತಿದ್ದರು.
ವಿಶ್ವಾಸ ಬೆಳೆದ ಮೇಲೆ ಅಮೆರಿಕದಿಂದ ಕಡಿಮೆ ಬೆಲೆಗೆ ಚಿನ್ನ ತರಿಸಿಕೊಡುತ್ತೇನೆ. ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಿಸಿಕೊಡುತ್ತೇನೆ ಎಂದು 50 ಲಕ್ಷದಿಂದ 2 ಕೋಟಿ ರೂ.ವರೆಗೆ ಪಡೆದು ಹೂಡಿಕೆ ಮಾಡಿ ಎಂದು ಹಣ ಪಡೆಯುತ್ತಿದ್ದಳು.
ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ಕೇಸ್ ದಾಖಲಾಗಿ ಬಂಧನವಾಗಿದ್ದರೂ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಸವಿತಾ ತನ್ನ ಹಳೇ ಚಾಳಿ ಮುಂದುವರಿಸಿ ವಂಚನೆ ಮಾಡಲು ಪ್ರಯತ್ನಿಸುತ್ತಿದ್ದಾಗ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.


