Thursday, December 25, 2025
Google search engine
Homeಅಪರಾಧಮಂಗಳೂರಿನಲ್ಲಿ 74 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶೀ ಮಹಿಳೆಯರು ಅರೆಸ್ಟ್

ಮಂಗಳೂರಿನಲ್ಲಿ 74 ಕೋಟಿ ಮೌಲ್ಯದ ಡ್ರಗ್ಸ್ ವಶ: ಇಬ್ಬರು ವಿದೇಶೀ ಮಹಿಳೆಯರು ಅರೆಸ್ಟ್

ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲ ಭೇದಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಬಂದು ಎಲೆಕ್ಟ್ರಾನಿಕ್ ಸಿಟಿ ಆಗಮಿಸಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದೇವೆ. ದಕ್ಷಿಣ ಆಫ್ರಿಕಾ ಮೂಲದ ಬಂಬಾ ಫಾಂಟಾ (31) ಹಾಗೂ ಅಬಿಗೈಲ್ ಅಡೋನಿಸ್ (30) ಬಂಧಿತರಾಗಿದ್ದಾರೆ. ಇವರ ಬಳಿ ಇದ್ದ 37.878 ಕೆಜಿ ಎಂಡಿಎಂಎ, 4 ಮೊಬೈಲ್ ಫೋನ್, 2 ಪಾಸ್ ಪೋರ್ಟ್, ಟ್ರಾಲಿ ಬ್ಯಾಗ್, 18,460 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಡ್ರಗ್ಸ್ ಮಾಫಿಯಾದ ಕಿಂಗ್ ಪಿನ್ ಅಬ್ದುಲ್ ಫೈಸಲ್ನನ್ನು ಬಂಧಿಸಲಾಗಿದ್ದು, ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿದ್ದಾರೆ ಎಂದರು.
6 ತಿಂಗಳ ಹಿಂದೆ ಮಂಗಳೂರಿನ ಪಂಪ್ ವೆಲ್ ಬಳಿ ಹೈದರ್ ಎಂಬವನನ್ನು ಬಂದಿಸಿದ್ದೆವು. ಆತನಿಂದ 15 ಗ್ರಾಂ ಡ್ರಗ್ ವಶಪಡಿಸಿದ್ದೆವು. ಆತನಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ಬಂಧನಕ್ಕೆ ಸಿಸಿಬಿ ಪೊಲೀಸರು 6 ತಿಂಗಳಿನಿಂದ ಕಾರ್ಯಾಚರಣೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಾಸ್ತವ್ಯವಿದ್ದ ನೈಜೀರಿಯಾ ಪ್ರಜೆ ಪೀಟರ್ನನ್ನು ಬಂಧಿಸಿದ್ದೆವು. ಆತನಿಂದ 6 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದೆವು. ಆತನ ಮಾಹಿತಿಯಂತೆ ಮತ್ತೆ ಕಾರ್ಯಾಚರಣೆ ಮಾಡಿ ಈ ಇಬ್ಬರು ಮಹಿಳೆಯರನ್ನು ಬಂಧಿಸಿದ್ದೇವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments