Friday, May 17, 2024
Google search engine
Homeಅಪರಾಧಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲು

17 ವರ್ಷ ದಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಇದರಿಂದ ಲೋಕಸಭಾ ಚುನಾವಣೆ ಸಿದ್ಧತೆ ಬೆನ್ನಲ್ಲೇ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಎಫ್ ಐರ್ ದಾಖಲಾಗಿದೆ.

ವಂಚನೆ ಪ್ರಕರಣದಲ್ಲಿ ನೆರವು ಕೇಳಲ ತಾಯಿ ಜೊತೆ ಮಗಳು ಫೆಬ್ರವರಿ 2ರಂದು 81 ವರ್ಷದ ವೃದ್ಧ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಮನೆಗೆ ತೆರಳಿದಾಗ ಯಡಿಯೂರಪ್ಪ ಮಗಳನ್ನು ತಮ್ಮ ರೂಮಿಗೆ ಕರೆಸಿಕೊಂಡರು. ಈ ವೇಳೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದಾಗ ಮಗಳು ಕೊಠಡಿಯಿಂದ ಓಡಿ ಬಂದಿದ್ದಳು. ಅಲ್ಲದೇ ಯಡಿಯೂರಪ್ಪ ವರ್ತನೆ ಬಗ್ಗೆ ತಾಯಿ ಬಳಿ ಹೇಳಿಕೊಂಡಿದ್ದಳು.

ಚುನಾವಣಾ ಹೊಸ್ತಿಲಲ್ಲಿ ಈ ಘಟನೆ ನಡೆದಿರುವುದರಿಂದ ಯಡಿಯೂರಪ್ಪ ವಿರುದ್ಧ ರಾಜಕೀಯ ತಂತ್ರ ನಡೆದಿದೆ ಎಂದು ಹೇಳಲಾಗದು. ಅಲ್ಲದೇ ಇದೊಂದು ಸೂಕ್ಷ್ಮ ವಿಚಾರ ಆಗಿರುವುದರಿಂದ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ ನಂತರ ವಿವರ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments