Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಮಾಜಿ ಎಂಎಲ್ ಸಿ ದಯಾನಂದ ರೆಡ್ಡಿ ಕಿಡ್ನಾಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 36 ವೀಕ್ಷಣೆಗಳು
mlc dayanad reddy

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಸೋಮವಾರ ತಡರಾತ್ರಿ ಆನೇಕಲ್ ಬಳಿ ನಡೆದಿದೆ.

ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಹಿಲಲಿಗೆ ಗ್ರಾಮದ ಸಮೀಪ ಬೈಕ್‌ನಲ್ಲಿ ಬಂದ ಇಬ್ಬರು ಅಡ್ಡಗಟ್ಟಿದ್ದಾರೆ.

ನಿಮಗೆ ಗಿಫ್ಟ್ ಬಂದಿದೆ ಎಂದು ಹೇಳಿ ಕಾಟನ್ ಬಾಕ್ಸ್ ತೋರಿಸಿದ್ದಾರೆ. ಕಾರಿನ ಡೋರ್ ಲಾಕ್ ತೆರೆದ ತಕ್ಷಣ ಓರ್ವ ವ್ಯಕ್ತಿ ಕಾರಿನೊಳಗೆ ನುಗ್ಗಿದ್ದು, ಗನ್ ತೋರಿಸಿ ತಾನು ಹೇಳಿದ ಕಡೆಗೆ ಕಾರು ಚಲಾಯಿಸುವಂತೆ ಸೂಚಿಸಿದ್ದಾನೆ.

ಈ ವೇಳೆ ಕೆಂಪು ಬಣ್ಣದ ಕಾರಿನಲ್ಲಿ ಮತ್ತಿಬ್ಬರು ಹಿಂಬಾಲಿಸಿದ್ದಾರೆ. ಬಳಿಕ ಅತ್ತಿಬೆಲೆ ಕೆಹೆಚ್‌ಬಿ ಬಡಾವಣೆ ಸಮೀಪ ಕರೆದೊಯ್ದ ದುಷ್ಕರ್ಮಿಗಳು ನಿನ್ನನ್ನು ಕೊಲ್ಲಲು 10 ಕೋಟಿ ರೂ. ಸುಪಾರಿ ನೀಡಿದ್ದಾರೆ ಎಂದು ಹೇಳಿ ಕುತ್ತಿಗೆಗೆ ಗನ್ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ.

ಈ ವೇಳೆ ನಾನೇ ಅಷ್ಟು ಹಣ ಕೊಡುತ್ತೇನೆ, ಕೊಲ್ಲಬೇಡಿ ಎಂದು ದಯಾನಂದ ರೆಡ್ಡಿ ಮನವಿ ಮಾಡಿದ್ದಾರೆ. ಮೊದಲು 3 ಕೋಟಿ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರು, ಬಳಿಕ 2 ಕೋಟಿ ರೂ.ಗೆ ಒಪ್ಪಿಕೊಂಡಿದ್ದಾರೆ.

ಸದ್ಯ ಹಣ ಇಲ್ಲ, ಬೆಳಗ್ಗೆ ಬ್ಯಾಂಕ್ ತೆರೆದ ಬಳಿಕ ಹಣ ನೀಡುವುದಾಗಿ ದಯಾನಂದರೆಡ್ಡಿ ಮನವಿ ಮಾಡಿದ್ದಾರೆ. ಹಣ ಡ್ರಾ ಮಾಡಿದ ಬಳಿಕ ಕರೆ ಮಾಡುವಂತೆ ಸೂಚಿಸಿ ಆರೋಪಿಗಳು ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದರೆಡ್ಡಿ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment