ಅಪರಾಧ ಚಟುವಟಿಕೆಗಳನ್ನು ಬಿಟ್ಟು ಕ್ಯಾಬ್ ಚಾಲಕನಾಗಿ ಜೀವನ ನಡೆಸುತ್ತಿದ್ದ ರೌಡಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿದ್ದ ಕೌಶಿಕ್ (25)ನನ್ನು ಸೋಮವಾರ ಮುಂಜಾನೆ 2:30ರ ವೇಳೆ ಬಿಯರ್ ಬಾಟಲಿಯಿಂದ ಚುಚ್ಚಿ, ಕಲ್ಲಿನಿಂದ ಜಜ್ಜಿ ಇಬ್ಬರು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಯಾದ ರೌಡಿ ಕೌಶಿಕ್ 2020ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ 8ನೇ ಆರೋಪಿಯಾಗಿ ಜೈಲು ಸೇರಿದ್ದ. ಬಳಿಕ ಜಾಮೀನಿನ ಮೂಲಕ ಹೊರಬಂದು, ಕ್ಯಾಬ್ ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ರೌಡಿ ಕೌಶಿಕ್, ಸ್ನೇಹಿತರೊಂದಿಗೆ ತಡರಾತ್ರಿಯವರೆಗೆ ಪಾರ್ಟಿ ಮಾಡಿದ್ದು,ಮುಂಜಾನೆ ಜಗಳ ಉಂಟಾಗಿ. ಜೊತೆಯಲ್ಲಿದ್ದ ಸ್ನೇಹಿತರೇ ಕೌಶಿಕ್ನನ್ನು ಮುಂಜಾನೆ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ ಎಂದು ಹೇಳಿದರು.


