Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಪ್ರೀತಿಸಿದವನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ಗುಜರಾತಿ ಮಹಿಳೆ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
bengaluru hoax bomb

ಪ್ರೀತಿಸಿದ ಹುಡಗನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಗುಜರಾತ್ ಮಹಿಳಾ ಟೆಕ್ಕಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಗುಜರಾತಿನ ರನೆ ಜೋಶಿಲ್ಡಾ ಎಂಬಾಕೆಯನ್ನು ಬಂಧಿಸಲಾಗಿದೆ. ಈಕೆ ಬೆಂಗಳೂರಿನ 7-9 ಶಾಲೆಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಳು.

ವರ್ಚುವಲ್ ಮೊಬೈಲ್ ನಂಬರ್ ಹೊಂದಿದ್ದ ಜೋಶಿಲ್ಡಾ ವಿಪಿಎನ್ ಬಳಸಿ ಇ-ಮೇಲ್ ಬಳಸಿ ಗೇಟ್ ಕೋಡ್ ಮೂಲಕ ಗುರುತು ಪತ್ತೆಯಾಗದಂತೆ ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ದೇಶದ ಹಲವು ನಗರಗಳ ಶಾಲಾ-ಕಾಲೇಜುಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದಳು.

ಜೋಶಿಲ್ಡಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಆತ ಮದುವೆ ಆಗಲು ನಿರಾಕರಿಸಿದ್ದರಿಂದ ಆತನನ್ನು ಸಿಕ್ಕಿಸಲು ಹುಸಿ ಬಾಂಬ್ ಬೆದರಿಕೆ ಕರೆ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಜೋಶಿಲ್ಡಾ ಬಳಿ 9 ವಾಟ್ಸಪ್ ಅಕೌಂಟ್ ಹೊಂದಿದ್ದು, ದಿನಕ್ಕೊಂದು ನಂಬರ್ ಗಳನ್ನು ಬಳಸುತ್ತಿದ್ದರಿಂದ ಪೊಲೀಸರಿಗೆ ಈಕೆ ಜಾಡು ಹಿಡಿಯುವುದು ಕಷ್ಟವಾಗಿತ್ತು. ಅಂತಿಮವಾಗಿ ಈಕೆಯ ಚಲನವಲನ ಗಮನಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಉತ್ತರ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆ ಗುಜರಾತ್ ಅಹಮದಾಬಾದ್ ಕೇಂದ್ರ ಕಾರಾಗೃಹದಲ್ಲಿ ಇದ್ದುಕೊಂಡು ಬಾಂಬ್ ಬೆದರಿಕೆ ಹಾಕಿದ್ದಳು.

ಬೆಂಗಳೂರಿನ ಪಬ್ಲಿಕ್ ಶಾಲೆಯೊಂದಕ್ಕೆ ಇಮೇಲ್ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಜೂ.14 ರಂದು ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಗೆ ಬಾಂಬ್ ಬೆದರಿಕೆ ಕರೆಬಂದಿತ್ತು. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸ್ ಆಯುಕ್ತರು, ಉತ್ತರ ವಿಭಾಗ ಸೈಬರ್ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಿದ್ದರು.

ಬಾಂಡಿ ವಾರೆಂಟ್ ಮುಖಾಂತರ ಗುಜರಾತ್‌ನಿಂದ ಕರೆದುಕೊಂಡು ಬಂದು ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಬೆಂಗಳೂರಿನ ಕಲಾಸಿಪಾಳ್ಯ ಸೇರಿ ಇತರೆ ಆರು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆರೋಪಿತಳ ವಿರುದ್ಧ ಗುಜರಾತ್, ಮೈಸೂರು, ತಮಿಳುನಾಡಿನ ಚೆನ್ನೈನಲ್ಲಿ ಹುಸಿಬಾಂಬ್ ಬೆದರಿಕೆ ಪ್ರಕರಣ ದಾಖಲಾಗಿದೆ.

ಆರೋಪಿತೆಯ ಪ್ರೀತಿ ನಿರಾಕರಣೆ ಮಾಡಿದ ಯುವಕನ ಸಂಕಷ್ಟಕ್ಕೆ ಸಿಕ್ಕಿಸಲು ಈ ಕೃತ್ಯ ಎಸಗಿದ್ದಾಳೆ. ಯುವಕನ ಇಮೇಲ್ ಐಡಿ ಬಳಸಿಕೊಂಡು ಹುಸಿಬಾಂಬ್ ಇಮೇಲ್ ಬೆದರಿಕೆ ಕಳಿಸಿದ್ದಳು. ಯುವಕನನ್ನ ಪದೇ ಪದೇ ಪ್ರೀತಿ ಮಾಡುವಂತೆ ಒತ್ತಾಯ ಮಾಡ್ತಿದ್ದಳು. ಆರೋಪಿತೆಯ ಪ್ರೀತಿ ಮತ್ತು ಗೆಳೆತನವನ್ನು ಯುವಕ ನಿರಾಕರಿಸಿದ್ದ. ಇದೇ ದ್ವೇಷಕ್ಕೆ ಆತನ ಹೆಸರಲ್ಲಿ ಹುಸಿಬಾಂಬ್ ಬೆದರಿಕೆ ಕಳುಹಿಸಿದ್ದಾಳೆ.

ಬೆಂಗಳೂರಿನ ಆರರಿಂದ ಏಳು ಶಾಲೆಗಳಿಗೆ ಹುಸಿಬಾಂಬ್ ಇಮೇಲ್ ಮಾಡಿದ್ದಳು. ಅಷ್ಟೇ ಅಲ್ಲದೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಬಾಂಬ್ ಬೆದರಿಕೆ ಹಾಕಿದ್ದಳು. ಗುಜರಾತ್‌ನ ವಿಮಾನ ದುರಂತದ ಹಾಗೆ ನಿಮ್ಮ ಶಾಲೆಗಳನ್ನ ಉಡಾಯಿಸುವುದಾಗಿ ಬೆದರಿಕೆ ಹಾಕಿದ್ದಳು. ಸದ್ಯ ಕೂಲಂಕುಷವಾಗಿ ಆರೋಪಿತೆಯ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment