10
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಪತಿ ಕೊಲೆ ಮಾಡಿದ ಭೀಕರ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶ ಮೂಲದ ದಂಪತಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಜಾಲಹಳ್ಳಿ ಕ್ರಾಸ್ ಬಳಿಯ ಮನೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಪತಿ ಕೊಲೆ ಮಾಡಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೀಣ್ಯ ಪೊಲೀಸರು ದೌಡಾಯಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.