Wednesday, December 24, 2025
Google search engine
Homeಅಪರಾಧಭದ್ರಾವತಿಯಲ್ಲಿ ದಾರುಣ ಘಟನೆ: ಪ್ರೇಮಿಗಳ ಮದುವೆ ಬೆಂಬಲಿಸಿದ ಇಬ್ಬರ ಕಗ್ಗೊಲೆ

ಭದ್ರಾವತಿಯಲ್ಲಿ ದಾರುಣ ಘಟನೆ: ಪ್ರೇಮಿಗಳ ಮದುವೆ ಬೆಂಬಲಿಸಿದ ಇಬ್ಬರ ಕಗ್ಗೊಲೆ

ಮನೆ ತೊರೆದು ಮದುವೆ ಆಗಿ ಮರಳಿದ ಪ್ರೇಮಿಗಳಿಗೆ ಸಹಕಾರಿಸಿದ್ದಾರೆ ಎಂಬ ಕಾರಣಕ್ಕಾಗಿ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ತಡರಾತ್ರಿ ನಡೆದಿದೆ.

ಭದ್ರಾವತಿಯ ಜೈ ಭೀಮ್ ನಗರದ ನಿವಾಸಿಗಳಾದ ಕಿರಣ್ (25) ಹಾಗೂ ಪೌರ ಕಾರ್ಮಿಕ ಮಂಜುನಾಥ್ (45) ಕೊಲೆಯಾದ ದುರ್ದೈವಿಗಳು. ಆರೋಪಿಗಳಾದ ಸಂಜಯ್, ಶಶಿ, ವೆಂಕಟೇಶ್, ಭರತ್ ಹಾಗೂ ಸುರೇಶ್ ಸೇರಿ ಐವರನ್ನು ಬಂಧಿಸಲಾಗಿದೆ.

ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೈ ಭೀಮ್ ನಗರದ ಪ್ರೇಮಿಗಳಿಬ್ಬರು ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಎರಡೂ ಕಡೆಯ ಕುಟುಂಬದವರು ಹಳೇ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಿಂದ ಸಂಜೆ ಠಾಣೆಗೆ ಆಗಮಿಸಿದ ಪ್ರೇಮಿಗಳಿಬ್ಬರು ತಮಗೆ ಜೀವ ಬೆದರಿಕೆ ಇದೆ. ಭದ್ರತೆ ಕೋರಿದರು.

ಕಿರಣ್, ಮಂಜುನಾಥ್ ಸೇರಿ ಹಲವರು ಪೊಲೀಸ್ ಠಾಣೆಗೆ ಬಂದು ಪ್ರೇಮಿಗಳಿಬ್ಬರ ಬಳಿ ಮಾತನಾಡುವಾಗ ಹುಡುಗಿಯ ಸಹೋದರ ಬಂದು ನನ್ನ ತಂಗಿಯ ಪ್ರೇಮಕ್ಕೆ ನೀವೆಲ್ಲಾ ಬೆಂಬಲ ನೀಡಿದ್ದೀರಿ ಎಂದು ಗಲಾಟೆ ಮಾಡಿದರು. ಸ್ಥಳದಲ್ಲಿದ್ದವರು ಗಲಾಟೆ ತಡೆದು ಮನೆಗೆ ಕಳುಹಿಸಿದ್ದರು. ಅಷ್ಟಕ್ಕೆ ಸುಮ್ಮನಾಗದ ಹುಡುಗಿಯ ಸಹೋದರ, ರಾತ್ರಿ ಕಿರಣ್, ಮಂಜುನಾಥ್ ಮನೆಯ ಬಳಿ ಬಂದು ಮತ್ತೆ ಜಗಳ ತೆಗೆದಿದ್ದಾನೆ.

ಜಗಳ ವಿಕೋಪಕ್ಕೆ ಹೋಗಿದ್ದು, ನನ್ನ ತಂಗಿ ತನ್ನ ಪ್ರೇಮಿಯ ಜೊತೆ ಓಡಿ ಹೋಗಲು ನೀವೇ ಮುಖ್ಯ ಕಾರಣ ಎಂದು ಚಾಕುವಿನಿಂದ ಕಿರಣ್ ಹಾಗೂ ಮಂಜುನಾಥನಿಗೆ ಇರಿದು ಸ್ಥಳದಿಂದ ಪರಾರಿಯಾಗಿದ್ಧಾನೆ. ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟರೆ, ಕಿರಣ್ ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಪ್ರಕರಣ ಸಂಬಂಧ ಹಳೇ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಐವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments