Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಜೂಜಿನಲ್ಲಿ ಪತ್ನಿ ಅಡವಿಟ್ಟು ಸೋತ ಪತಿ: ಮಾವ, ಮೈದುನ ಸೇರಿ 8 ಮಂದಿಯಿಂದ ಸಾಮೂಹಿಕ ಅತ್ಯಾಚಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
rape
rape

ಹೆಂಡತಿಯ ಪಣವಾಗಿಟ್ಟ ಗಂಡ ಜೂಜಿನಲ್ಲಿ ಸೋತಿದ್ದರಿಂದ ಮಾವ, ಮೈದುನ ಸೇರಿ 8 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಆಧುನಿಕ ಮಹಾಭಾರತದ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ.

ಕಳೆದ ವರ್ಷ ಅಕ್ಟೋಬರ್​ನಲ್ಲಿ ಮೀರತ್​ನ ಖಿವಾಯ್ ಗ್ರಾಮದ ಡ್ಯಾನಿಶ್ ಎಂಬಾತನನ್ನು ಮದುವೆಯಾಗಿದ್ದ ಮಹಿಳೆಗೆ ಪತಿ ಮತ್ತು ಅತ್ತೆ, ಮಾವ ವರದಕ್ಷಿಣೆ ಕಿರುಕುಳ ನೀಡಲಾರಂಭಿಸಿದ್ದರು.

ಡ್ಯಾನಿಶ್​ಗೆ ಮದ್ಯಪಾನ ಹಾಗೂ ಜೂಜಿನ ಚಟವಿತ್ತು. ಕುಡಿದು ಬಂದು ಆಕೆಯನ್ನು ಹೊಡೆಯುತ್ತಿದ್ದ. ಜೂಜಿನ ವೇಳೆ ಪತ್ನಿಯನ್ನೇ ಅಡವಿಟ್ಟ ಡ್ಯಾನಿಶ್ ಸೋಲುಂಡಿದ್ದಾನೆ. ಜೂಜಿನಲ್ಲಿ ಸೋತ ಬಳಿಕ ಪರ ಪುರುಷರೊಂದಿಗೆ ಮಲಗುವಂತೆ ಒತ್ತಾಯಿಸಿದ್ದಾನೆ. ಆಕೆ ನಿರಾಕರಿಸಿದಾಗ ಸ್ವತಹ ಮಾವ, ಗಂಡನ ಅಣ್ಣ ಉಮೇಶ್ ಗುಪ್ತಾ, ಮೋನು ಮತ್ತು ಅನ್ಶುಲ್ ಸೇರಿ 8 ಮಂದಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಗಂಡನ ಅಣ್ಣ ಶಾಹಿದ್ ಹಾಗೂ ಅತ್ತಿಗೆಯ ಪತಿ ಶೌಕೀನ್ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ. ತನ್ನ ಮಾವ ಯಾಮಿನ್ ಅತ್ಯಾಚಾರ ಎಸಗಿ ನೀನು ವರದಕ್ಷಿಣೆ ತರಲಿಲ್ಲ, ಆದ್ದರಿಂದ ನಾವು ಹೇಳುವುದೆಲ್ಲವನ್ನೂ ನೀನು ಪಾಲಿಸಬೇಕು. ನಮ್ಮನ್ನು ಸಂತೋಷ ಪಡಿಸಬೇಕೆಂದು ಹೇಳಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಗಂಡ ಮತ್ತು ಮನೆಯವರು ತಾನು ಗರ್ಭಿಣಿ ಆದಾಗ ಬಲವಂತವಾಗಿ ಅಬಾರ್ಷನ್ ಮಾಡಿಸಿದ್ದಾರೆ. ಆ್ಯಸಿಡ್ ಸುರಿದು, ನನ್ನನ್ನು ಕೊಲ್ಲುವ ಉದ್ದೇಶದಿಂದ ನದಿಗೆ ಎಸೆದಿದ್ದರು. ದಾರಿಹೋಕರು ನನ್ನನ್ನು ರಕ್ಷಿಸಿದ್ದಾರೆ, ಈಗ ಈ ಪ್ರಕರಣ ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಲಾಗುತ್ತಿದೆ ಎಂದೂ ಸಂತ್ರಸ್ತೆ ತಿಳಿಸಿದ್ದಾರೆ.

ಆಕೆ ಬಾಗ್‌ಪತ್‌ನಲ್ಲಿರುವ ಎಸ್‌ಪಿ ಕಚೇರಿಯನ್ನು ಸಂಪರ್ಕಿಸಿದ್ದು, ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಎಕ್ಸ್‌ ಅಧಿಕೃತ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment