ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಮಹಿಳೆಗೆ ಪ್ರೀತಿಸುವಂತೆ ಮಹಿಳೆಗೆ ನಡುರಸ್ತೆಯಲ್ಲೇ ಕಿರುಕುಳ ನೀಡಿದ ಯುವಕನನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.
ಡಿಸೆಂಬರ್ 22ರಂದು ಉಳ್ಳಾಲ ಮುಖ್ಯ ರಸ್ತೆಯಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ನವೀನ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ .
ಟೆಲಿ ಕಾಲರ್ ಕೆಲಸ ಮಾಡಿಕೊಂಡಿದ್ದ ಯುವತಿಗೆ 2024ರಲ್ಲಿ ಇನ್ಸ್ಟಾಗ್ರಾಂ ಮೂಲಕ ನವೀನ್ ಕುಮಾರ್ ಪರಿಚಯವಾಗಿದ್ದ. ಆಗಾಗ ಕಾಲ್, ಮೆಸೇಜ್ ಮಾಡುತ್ತಿದ್ದ ಆರೋಪಿಯು ಇತ್ತೀಚೆಗೆ ತನ್ನನ್ನು ಪ್ರೀತಿಸುವಂತೆ ಪೀಡಿಸಲಾರಂಭಿಸಿದ್ದ.
ಯುವತಿಯು ಸೋಮವಾರ ಮಧ್ಯಾಹ್ನ ಪಿ.ಜಿ ಬಳಿ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನವೀನ್, ಆಕೆಯ ಸ್ನೇಹಿತೆಯ ಮುಂದೆಯೇ ಎಳೆದಾಡಿ ಹಲ್ಲೆ ಮಾಡಿದ್ದಾನೆ. ಅಲ್ಲದೆ ಯುವತಿಯ ಬ್ಯಾಗ್ ಕಸಿದು ತಡಕಾಡಿ ನಂತರ ಕಾಲ್ಕಿತ್ತಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.
ಘಟನೆಯ ಸಂಪೂರ್ಣ ದೃಶ್ಯವು ಪಿ.ಜಿ ಕಟ್ಟಡದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿ ನೀಡಿದ್ಧ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


