ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಅಮೃತ್ ಸಿರಿಯೂರ್ (40) ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೈಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
ಕೆಎಸ್ ಡಿಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ 2019ರಲ್ಲಿ ಎರಡನೇ ಮದುವೆ ಆಗಿದ್ದು, ಕೌಟುಂಬಿಕ ಕಲಹದಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.
ತಂದೆ-ತಾಯಿಗೆ ಒಳ್ಳೆಯ ಮಗನಾಗಿರಲಿಲ್ಲ. ಪತ್ನಿಗೆ ಒಳ್ಳೆಯು ಗಂಡನಾಗಿರಲಿಲ್ಲ ಎಂಬುದು ಸೇರಿದಂತೆ ಹಲವು ವಿಷಯಗಳನ್ನು ಡೆತ್ ನೋಟ್ ನಲ್ಲಿ ಅಮೃತ್ ಬರೆದಿದ್ದಾರೆ ಎಂದು ಹೇಳಲಾಗಿದೆ.
ಮಹಾಲಕ್ಷ್ಮಿ ಲೇಔಟ್ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತನಿಖೆ ಆರಂಭಿಸಿದ್ದಾರೆ.