Wednesday, December 24, 2025
Google search engine
Homeಅಪರಾಧಬಿಜೆಪಿ ಶಾಸಕ ಬೈರತಿ ಬಸವರಾಜು ವಿರುದ್ಧ ಲುಕೌಟ್ ನೋಟಿಸ್ ಜಾರಿ?

ಬಿಜೆಪಿ ಶಾಸಕ ಬೈರತಿ ಬಸವರಾಜು ವಿರುದ್ಧ ಲುಕೌಟ್ ನೋಟಿಸ್ ಜಾರಿ?

ಬೆಂಗಳೂರು: ರೌಡ ಬಿಕ್ಕು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ಮುಂದಾಗಿದೆ.

ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರದ ಪುಣೆಗೆ ತೆರಳಿದ್ದು, ಅಲ್ಲಿಂದ ಫೋನ್ ಸ್ವಿಚಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದಾರೆ.

ಸಿಐಡಿಯ 3 ತಂಡಗಳು ಅವರಿಗಾಗಿ ಎರಡು ಮೂರು ರಾಜ್ಯಗಳಲ್ಲಿ ಶೋಧ ನಡೆಸುತ್ತಿರುವ ನಡುವೆ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ.

ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್‌ ನೀಡಲು ಮುಂದಾಗಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.

ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೆಆರ್ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್‌ ಹಾಜರಾಗಿದ್ದರು. ನಂತರ ಅಧಿವೇಶನಕ್ಕೆ ಬರದೇ ಗೈರಾಗಿದರು.

ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಒಳಸಂಚು ನಡೆಸಿರುವ ಆರೋಪ ಎದುರಿಸುತ್ತಿರುವ ಬೈರತಿ ಬಸವರಾಜ್, ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದರ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದಿಸಿದ್ದರು.

ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಬಂಧನ ಮಾಡಲು ಸಿಐಡಿ ಟೀಂ ಮುಂದಾಗಿದೆ.

ಬಿಕ್ಕು ಶಿವ ಹತ್ಯೆ ಪ್ರಕರಣ

ಕಳೆದ ಜುಲೈ 15ರ ರಾತ್ರಿ ಬಿಲ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು. ಈತನ ನಿಜವಾದ ಹೆಸರು ಶಿವಪ್ರಕಾಶ್ ಅಥವಾ ಶಿವಕುಮಾರ್, ವಯಸ್ಸು ಸುಮಾರು 40-44. ಬೆಂಗಳೂರಿನ ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ. ಆತನ ವಿರುದ್ಧ ಭಾರತಿನಗರ ಪೊಲೀಸ್‌ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 2025 ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮಿನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು. ಹತ್ಯೆ ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಸಹ ಬಯಲಾಗಿವೆ. ಬಿಕ್ಷು ಶಿವನ ತಾಯಿ ವಿಜಯಲಕ್ಷ್ಮಿ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments