ಮಂಗಳೂರು ಉಲ್ಲಾಳದ ಕೋಟೆಕಾರ್ ಬ್ಯಾಂಕ್ನಲ್ಲಿ ಚಿನ್ನಾಭರಣ,ನಗದು ದರೋಡೆ ಪ್ರಕರಣದ ಕಿಂಗ್ ಪಿನ್ ಕಣ್ಣನ್ಮಣಿಗೆ ನಗರ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧ ಸೋಮವಾರ ಬಂಧಿಸಿ ನಗರಕ್ಕೆ ಕರೆತಂದಿದ್ದ ಮೂವರು ಬ್ಯಾಂಕ್ ದರೋಡೆಕೋರರನ್ನು ಸ್ಥಳ ಮಹಜರು ನಡೆಸಲು ತಲಪಾಡಿಯ ಅಲಂಕಾರು ಗುಡ್ಡದ ಬಳಿ ಕರೆದೊಯ್ಯಲಾಗಿತ್ತು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆತ್ಮರಕ್ಷಣೆಗೆ ಆರೋಪಿ ಕಣ್ಣನ್‌ಮಣಿ ಕಾಲಿಗೆ ಗುಂಡು ಹಾರಿಸಲಾಗಿದೆ.
ತಮಿಳುನಾಡಿನ ತಿರುವನ್ವೇಲಿ ಬಳಿ ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿ ಸೇರಿ ಮೂವರು ದರೋಡೆಕೋರರನ್ನು ಬಂಧಿಸಿ ತಮಿಳುನಾಡಿನಿಂದ ಆರೋಪಿಗಳನ್ನ ಮಂಗಳೂರಿನ ಕೆ.ಸಿ.ರೋಡ್ಗೆ ಮಹಜರು ಮಾಡಲು ಕರೆತರಲಾಗುತ್ತಿತ್ತು.
ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಅಲಂಕಾರು ಗುಡ್ಡ ಬಳಿ ಆರೋಪಿ ಕಣ್ಣನ್‌ಮಣಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಇನ್ಸ್‌ಪೆಕ್ಟರ್ ರಫೀಕ್, ಆರೋಪಿ ಮೇಲೆ ಫೈರಿಂಗ್ ಮಾಡಿದ್ದು ಗಾಯಗೊಂಡಿರುವ ಆತನನ್ನು ದೇರಳಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಶುಕ್ರವಾರ ಹಾಡಹಗಲೇ ಕೋಟೆಕಾರು ಸಹಕಾರಿ ಬ್ಯಾಂಕ್‌ಗೆ ನುಗ್ಗಿ ದರೋಡೆ ಮಾಡಿದ್ದ ಗ್ಯಾಂಗ್ ಕೇರಳ ಮೂಲಕ ತಮಿಳುನಾಡು ಸೇರಿದ್ದರು. ಖಚಿತ ಮಾಹಿತಿ ಮೇರೆಗೆ ಗ್ಯಾಂಗ್‌ನ ಮೂವರನ್ನು ಪೊಲೀಸರು ಬಂಧಿಸಿದ್ದರು.
ಕೋಟೆಕಾರು ಬ್ಯಾಂಕ್ ಲೂಟಿ ಮಾಡಿದವರು ತಮಿಳುನಾಡಿನವರೇ ಆದರೂ, ಇವರೆಲ್ಲಾ ಮುಂಬೈನ ನಟೋರಿಯಸ್ ಧಾರಾವಿ ಗ್ಯಾಂಗ್‌ನವರು. ಕೋಟೆಕಾರ್ ಬ್ಯಾಂಕ್ ದರೋಡೆಯ ಕಿಂಗ್ ಪಿನ್ ಮುರುಗನ್ ದರೋಡೆಯ ಕಂಪ್ಲೀಟ್ ಪ್ಲ್ಯಾನ್ ಸಿದ್ಧಪಡಿಸಿದ್ದೇ ಮುರುಗನ್, ಧಾರಾವಿಯಲ್ಲಿ ಆಕ್ಟೀವ್ ಆಗಿದ್ದ ಮೊಸ್ಟ್ ಡೇಂಜರಸ್ ಗ್ಯಾಂಗ್, ಈ ಹಿಂದೆಯೂ ಹಲವು ದರೋಡೆ ನಡೆಸಿ ಪಳಗಿದೆ.
700 ಕಿ.ಮೀ ಕಾರಲ್ಲೇ ಪಯಣ
ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ನಲ್ಲಿ ದರೋಡೆ ಮಾಡಿದ ದುಷ್ಕರ್ಮಿಗಳು ಕದ್ದ ನಗದು ಚಿನ್ನವನ್ನು ಗೋಣಿ ಚೀಲದಲ್ಲಿಟ್ಟುಕೊಂಡು 700 ಕಿ.ಮೀ ಕಾರಿನಲ್ಲೇ ಪ್ರಯಾಣಿಸಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ ಮಂಗಳೂರಿನಿಂದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದ ದರೋಡೆಕೋರರು ತಮಿಳುನಾಡಿನ ತಿರುನಲ್ವೇಲಿಗೆ ಬಂದು ಅಜ್ಞಾತ ಸ್ಥಳದಲ್ಲಿ ಕಾರು ಬಿಟ್ಟು ಚಿನ್ನದ ಜೊತೆ ಪರಾರಿಯಾಗಿದ್ದರು.
ದರೋಡೆಕೋರರ ಜಾಡು ಹಿಡಿದು ಹೊರಟಿದ್ದ ನಗರ ಪೊಲೀಸರಿಗೆ ತಮಿಳುನಾಡಿನಲ್ಲಿ ಕಾರು ಪತ್ತೆಯಾಗಿದೆ. ನಂತರ ಕಾರಿನ ಚೇಸಿಸ್ ನಂಬರ್ ಆಧಾರದಲ್ಲಿ ಕಾರಿನ ನೈಜ ಮಾಲೀಕನ ಮಾಹಿತಿ ಸಂಗ್ರಹಿಸಿದ್ದಾರೆ. ಆ ಬಳಿಕ ತಮಿಳುನಾಡಿನಲ್ಲಿ ಜಾಲಾಡಿದ ಮಂಗಳೂರು ಪೊಲೀಸರಿಗೆ ಮೂವರು ಆಗಂತುಕರ ಜಾಡು ಪತ್ತೆಯಾಗಿದೆ. ತಮಿಳುನಾಡಿನ ತಿರುನಲ್ವೇಲಿ ಬಳಿ ಮೂವರು ದರೋಡೆಕೋರರನ್ನು ಬಂಧಿಸಲಾಗಿದೆ.