Monday, 16 November 2026 — Kannadavahini
BREAKING NEWS
ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ಅಪರಾಧ

28 ವಿಶ್ವವಿದ್ಯಾಲಯಗಳ 520 ನಕಲಿ ಅಂಕಪಟ್ಟಿ ಹೊಂದಿದ್ದ ಮಾಸ್ಟರ್ ಮೈಂಡ್ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು

ಕಲಬುರಗಿ: ಶಿಕ್ಷಣ ಕ್ಷೇತ್ರವನ್ನೇ ಬೆಚ್ಚಿಬಿಳಿಸುವ ಅಂತರರಾಜ್ಯ ನಕಲಿ ಅಂಕಪಟ್ಟಿ ಜಾಲವನ್ನು ಕಲಬುರಗಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸುವ ಮೂಲಕ ಪತ್ತೆ ಹಚ್ಚಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮೂಲದ ಮಾಸ್ಟರ್ ಮೈಂಡ್ ರಾಜೀವ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ಈತ ದೇಶದಾದ್ಯಂತ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಿರುದ್ಯೋಗ ಯುವಕರಿಗೆ ನಕಲಿ ಅಂಕಪಟ್ಟಿ ನೀಡಿ ಅವರಿಂದ ಸಾವಿರಾರು ರೂಪಾಯಿ ಪಡೆದು ವಂಚನೆ ಮಾಡಿರುವುದಾಗಿ ಪೋಲಿಸರ ತನಿಖೆ ವೇಳೆ ಬಯಲಾಗಿದೆ.

ಬಂದಿತ ಆರೋಪಿ ದೆಹಲಿ ಮೂಲದ ರಾಜೀವ ಸಿಂಗ್ ಅರೋರಾ ಪ್ರೇಮಸಿಂಗ್, ಬೆಂಗಳೂರು, ಮೈಸೂರು, ಆಗ್ರಾ, ರಾಜಸ್ಥಾನ, ಉತ್ತರ ಪ್ರದೇಶ,ಹಿಮಾಚಲ ಪ್ರದೇಶ, ಕುರುಕ್ಷೇತ್ರ, ಛತ್ತಿಸ್ ಘಡ, ಫಿರೋಝಾಬಾದ್, ಬಿಲಾಸಪುರ, ಭೂಪಾಲ್, ಕನಪೂರ, ಝಾನ್ಸಿ, ನೈನಿತಾಲ್, ತಮಿಳನಾಡು, ಉತ್ತರಾಖಂಡ, ಅರುಣಾಚಲ್ ಪ್ರದೇಶ ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿಶ್ವವಿದ್ಯಾನಿಲಯಗಳು ಸೇರಿದಂತೆ ನಕಲಿ ವಿಶ್ವವಿದ್ಯಾನಿಲಯಗಳ ಹೆಸರಲ್ಲಿ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಮಾಹಿತಿ ನೀಡಿದ್ದಾರೆ.

ನಗರದ ಪೊಲೀಸ್ ಕಮಿಷನರ್ ಕಛೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಪಿಯುಸಿ ಡಿಪ್ಲೊಮಾ ಇನ್ಎಜುಕೇಶನ್, ಡಿಪ್ಲೊಮಾ ಆಫ್ ಮೆಡಿಕಲ್ ಲ್ಯಾಬರೋಟರ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಫಾರ್ಮಸಿ, ಡಿಪ್ಲೊಮಾ ಆಫ್ ಆಪರೇಷನ್ ಥಿಯೇಟರ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಪೋಸ್ಟ್ ಗ್ರ್ಯಾಜುವೇಟ್ ಡಿಪ್ಲೊಮಾ ಇನ್ ಕಂಪ್ಯೂಟರ್, ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್, ಪಿ.ಎಚ್.ಡಿ ಎಂಟ್ರೇನ್ಸ್ ಟೆಸ್ಟ್, ಪಿ.ಎಚ್.ಡಿ ಸೆಲೆಕ್ಷನ್ ಸರ್ಟಿಫಿಕೇಟ್, ಆರ್.ಡಿ.ಸಿ, ಬ್ಯಾಚುಲರ್ ಆಫ್ ಎಜುಕೇಶನ್,ಬಿ.ಎಡ್ ಇತ್ಯಾದಿ 26 ಕೋರ್ಸಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಎಂದು ವಿವರಿಸಿದರು.

ಬಂಧಿತ ಆರೋಪಿಯಿಂದ ನಕಲಿ ಅಂಕಪಟ್ಟಿ ತಯಾರಿಸಲು ಬಳಕೆ ಮಾಡುತ್ತಿದ್ದ 2 ಲ್ಯಾಪ್ ಟಾಪ್ ಗಳು, 1 ಪ್ರಿಂಟರ್, 36 ಮೊಬೈಲ್ ಫೋನ್ ಗಳು ಮತ್ತು 28 ವಿವಿಧ ವಿಶ್ವವಿದ್ಯಾನಿಲಯಗಳ ಹೆಸರಿನಲ್ಲಿರುವ ಅಂದಾಜು ಒಟ್ಟು 522 ನಕಲಿ ಅಂಕಪಟ್ಟಿಗಳು ಹಾಗೂ 28 ವಿವಿಧ ವಿಶ್ವವಿದ್ಯಾನಿಲಯಗಳ ಹೆಸರಿನಲ್ಲಿರುವ ಅಂದಾಜು ಒಟ್ಟು 122 ನಕಲಿ ಸೀಲ್ ಗಳು, ನಕಲಿ ಅಂಕಪಟ್ಟಿ ತಯಾರಿಸಲು ವಿವಿಧ ವಿಶ್ವವಿದ್ಯಾನಿಲಯಗಳ ಹೆಸರಿನಲ್ಲಿ ಮುದ್ರಿಸಿಟ್ಟುಕೊಂಡ ಒಟ್ಟು 1,626 ಖಾಲಿ ಪೇಪರ್ ಗಳು, ವಿವಿಧ ಹೆಸರಿನಲ್ಲಿ ಆರೋಪಿತನು ಬಳಕೆ ಮಾಡುತ್ತಿದ್ದ ಸುಮಾರು 87 ಬ್ಯಾಂಕ್ ಖಾತೆಗಳ ಪಾಸ್ ಬುಕ್, ಚೆಕ್ ಬುಕ್, ಎಟಿಎಂ ಕಾರ್ಡಗಳು, ಬೇರೆ ಬೇರೆಯವರ ಹೆಸರಿನಲ್ಲಿ ತಯಾರಿಸಿಟ್ಟುಕೊಂಡ ನಕಲಿ ಐ.ಡಿ. ಕಾರ್ಡಗಳು ಹಾಗೂ ನಕಲಿ ಅಂಕಪಟ್ಟಿಗಳನ್ನು ಹಾಗೂ ನಗದು ಜಪ್ತಿ ಪಡಿಸಿಕೊಳ್ಳಲಾಗಿದೆ ಎಂದರು.

ನಕಲಿ ಅಂಕಪಟ್ಟಿಗಳನ್ನು ತಯಾರಿಸುವ ಅಪರಾಧ ಕೃತ್ಯದಲ್ಲಿ ಭಾಗಿಯಾದ ಇನ್ನಿತರ ಆರೋಪಿತರ ಪತ್ತೆ ಕಾರ್ಯಚರಣೆ ಮುಂದುವರೆದಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ನಕಲಿ ಅಂಕಪಟ್ಟಿ ಜಾಲ ಭೇದಿಸುವಲ್ಲಿ ಯಶಸ್ವಿಯಾಗಿರುವ ಸೆನ್ ಪೋಲಿಸರ ಕಾರ್ಯಚರಣೆಗೆ ಫೋಲಿಸ್ ಕಮಿಷನರ್ ಡಾ.ಶರಣಪ್ಪ ಢಗೆ ಪ್ರಶಂಸೆ ವ್ಯಕ್ತಪಡಿಸಿದರು‌.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8418 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment