ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್, ಅತ್ಯಾಚಾರ, ಏಡ್ಸ್-ಎಚ್ ಐವಿ ಅಂತಹ ಸೋಂಕು ಹರಡುವ ಬೆದರಿಕೆಯ ಆರೋಪಗಳು ನಿಜ ಎಂಬುದು ತನಿಖೆಯಲ್ಲಿ ದೃಢಪಟ್ಟಿವೆ ಎಂದು ಸಿಐಡಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ತಿಳಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದ 2481 ಪುಟಗಳ ಆರೋಪಪಟ್ಟಿಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಎಲ್ಲಾ ಗಂಭೀರ ಆರೋಪಗಳು ನಿಜ ಎಂದು ಸಿಐಡಿ ಆರೋಪ ಪಟ್ಟಿಯಲ್ಲಿ ದೃಢಪಡಿಸಿದೆ.
ಎಚ್ ಐವಿ- ಏಡ್ಸ್ ಸೋಂಕಿತರ ಮೂಲಕ ತಮ್ಮ ವಿರೋಧಿಗಳನ್ನು ಹನಿಟ್ರ್ಯಾಪ್ ಮೂಲಕ ಬೀಳಿಸಿಕೊಂಡು ತಮ್ಮ ಕಾರ್ಯ ಸಾಧನೆ ಮಾಡುತ್ತಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ವಿವರಿಸಲಾಗಿದೆ. ಇದರಿಂದ ಪ್ರಸ್ತುತ ಜಾಮೀನಿನ ಮೇಲೆ ಹೊರಗೆ ಇರುವ ಮುನಿರತ್ನಗೆ ಸಂಕಷ್ಟ ಹೆಚ್ಚಾಗಲಿದೆ.
ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ. ಶ್ರೀನಿವಾಸ್ ಮತ್ತು ಎ8 ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ಆರೋಪಗಳು ಕೂಡ ತನಿಖೆಯಲ್ಲಿ ದೃಢಪಟ್ಟಿವೆ.
ಇನ್ಸ್ ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದು, ಐಯಣ್ಣ ರೆಡ್ಡಿ ಸೇರಿದಂತೆ ಇತರೆ ಆರೋಪಿಗಳಾದ ಸುಧಾಕರ್, ಶ್ರೀನಿವಾಸ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ.
ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ೭ ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕೋಲಾರ ಬಳಿ ಹೊರರಾಜ್ಯಕ್ಕೆ ಪರಾರಿ ಆಗುತ್ತಿದ್ದ ಮುನಿರತ್ನ ಅವರನ್ನು ಬಂಧಿಸಿತ್ತು. ಸುಮಾರು ಎರಡೂವರೆ ತಿಂಗಳ ತನಿಖೆ ನಂತರ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.
ಎಸ್ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದ್ದು, 8 ಜನರ ಸಾಕ್ಷಿದಾರರು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಯತ್ನ ಸೇರಿ 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ಗೆ ಜಾತಿನಿಂದನೆ ಹಾಗೂ ಬಿಜೆಪಿ ಕಾರ್ಯಕರ್ತೆ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಿ ಸಿಐಡಿ ನವೆಂಬರ್ 30ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಗುತ್ತಿಗೆದಾರನ ಬಳಿ ಲಂಚ ಕೇಳಿದ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಅನುಮತಿಗೆ ಎಸ್ಐಟಿ ಕಾಯುತ್ತಿದೆ.