Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಶಿವಮೊಗ್ಗದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ಕಳ್ಳ ಪೊಲೀಸ್ ಬಲೆಗೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 564 ವೀಕ್ಷಣೆಗಳು
shivamogga thief

ಶಿವಮೊಗ್ಗ : ನಗರದ ವಿದ್ಯಾನಗರ ಬಡಾವಣೆಯಲ್ಲಿ ಇತ್ತೀಚೆಗೆ ನಡೆದಿದ್ದ ಬೃಹತ್ ಮನೆ ಕಳ್ಳತನ ಪ್ರಕರಣವನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 1.02 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

​ಮೊಹಮ್ಮದ್ ರಫೀಕ್ ಬಂಧಿತ ಆರೋಪಿ. ಈ ಕುರಿತು ಶಿವಮೊಗ್ಗದಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ‘ವಿದ್ಯಾನಗರದ ನಿವಾಸಿ ನಟರಾಜ್ ಎಂಬುವವರ ಮನೆಯಲ್ಲಿ ಸುಮಾರು 900 ಗ್ರಾಂ ಚಿನ್ನಾಭರಣ ಕಳುವಾಗಿತ್ತು. ಈ ಸಂಬಂಧ ಸಲ್ಲಿಕೆಯಾದ ದೂರಿನನ್ವಯ ತನಿಖೆಗೆ ಇನ್ಸ್‌ಪೆಕ್ಟರ್ ಹರೀಶ್ ನೇತೃತ್ವದಲ್ಲಿ ವಿಶೇಷ ಪಡೆಯನ್ನು ರಚಿಸಲಾಗಿತ್ತು. ತನಿಖಾ ತಂಡವು ಅತ್ಯಲ್ಪ ಅವಧಿಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ’ ಎಂದು ತಿಳಿಸಿದರು.

ಆರೋಪಿ ಮೊಹಮ್ಮದ್ ರಫೀಕ್ ಸಾರ್ವಜನಿಕ ಸಾರಿಗೆಗಳಾದ ರೈಲು ಹಾಗೂ ಬಸ್‌ಗಳ ಮೂಲಕ ನಗರಕ್ಕೆ ಆಗಮಿಸುತ್ತಿದ್ದ. ಬಳಿಕ ವಿವಿಧ ವಸತಿ ಬಡಾವಣೆಗಳಲ್ಲಿ ಸಂಚರಿಸಿ, ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಕಳ್ಳತನ ಎಸಗುತ್ತಿದ್ದ. ಆತನ ಚಲನವಲನ ಹಾಗೂ ಕೃತ್ಯ ಎಸಗುತ್ತಿದ್ದ ಮಾದರಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎಸ್‌ಪಿ ವಿವರಿಸಿದರು.

​ಪ್ರಕರಣ ಭೇದಿಸಿದ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಹಾಗೂ ಸಿಬ್ಬಂದಿಗಳಾದ ನಂದರಾಜು, ವಸಂತ್, ರಾಜು, ಕಿಶೋರ್, ರಮ್ಯನಾಥ್, ಅಂಜನಪ್ಪ, ನವೀನ್, ಗುರುರಾಜ್, ಇಂದ್ರೇಶ್ ಮತ್ತು ಕೀರ್ತನ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದ ಎಸ್‌ಪಿ, ಇಡೀ ತಂಡಕ್ಕೆ ಸೂಕ್ತ ಬಹುಮಾನ ನೀಡುವುದಾಗಿ ಘೋಷಿಸಿದರು. ಮನೆಗೆ ಬೀಗ ಹಾಕಿ ತೆರಳುವಾಗ ಅದು ಹೊರಗಿನಿಂದ ಸುಲಭವಾಗಿ ಕಾಣಿಸಬಾರದು. ಗೇಟ್ ಅಥವಾ ಮುಖ್ಯ ಬಾಗಿಲಿಗೆ ಹಾಕಿದ ಬೀಗ ಸ್ಪಷ್ಟವಾಗಿ ಕಂಡರೆ ಕಳ್ಳರಿಗೆ ಕೃತ್ಯ ಎಸಗಲು ಸುಲಭವಾಗುತ್ತದೆ. ​ಮನೆ ಹಾಗೂ ಸುತ್ತಮುತ್ತ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವುದು ಸೂಕ್ತ ಎಂದರು.

ದೀರ್ಘಕಾಲದವರೆಗೆ ಊರಿಗೆ ಅಥವಾ ಹೊರಗೆ ತೆರಳುವ ಸಾರ್ವಜನಿಕರಿಗಾಗಿ ಪೊಲೀಸರು ‘ಲಾಕ್ ಹೌಸ್ ವಾಚ್’ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಸಾರ್ವಜನಿಕರು ತಮ್ಮ ಮನೆಯ ವಿಳಾಸ ಹಾಗೂ ವಿವರಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ನೀಡಿದರೆ, ಆ ಮನೆಗಳ ಮೇಲೆ ಪೊಲೀಸ್ ಗಸ್ತು ನಿಗಾ ವಹಿಸಲಿದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment