Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಲೋಕಾಯುಕ್ತ ದಾಳಿಗೆ ಬೆದರಿ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ ಸ್ಪೆಕ್ಟರ್ ಪರಾರಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು
inspector

ಕಡಿಮೆ ಬೆಲೆಗೆ ಮನೆ ಮಾರಾಟ ಮಾಡುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ಬೆನ್ನಲ್ಲೇ ಇನ್ ಸ್ಪೆಕ್ಟರ್ ಪರಾರಿಯಾಗಿದ್ದಾರೆ.

ಗುತ್ತಿಗೆದಾರ ಚೆನ್ನೇಗೌಡ ಹಾಗೂ ಪತ್ನಿ ಮೇಲೆ ಸುಳ್ಳು ಪ್ರಕರಣ ದಾಖಲಿಸಿ 4 ಕೋಟಿ ರೂ. ಮೌಲ್ಯದ ಮನೆಯನ್ನು ತಾನು ಹೇಳಿದವರಿಗೆ 60 ಲಕ್ಷ ರೂ.ಗೆ ಮಾರಾಟ ಮಾಡುವಂತೆ ಕಿರುಕುಳ ನೀಡುತ್ತಿದ್ದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್‌ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆಸಿದೆ.

ಈ ಹಿಂದೆ ದಾಖಲಾಗಿದ್ದ ಕೇಸ್ ಮೇಲೆ ಬಿ ರಿಪೋರ್ಟ್‌ಗೆ ಹಾಕುತ್ತೇನೆ. ಮನೆಯನ್ನು ಬರೆದುಕೊಡಿ ಎಂದು ಇನ್ಸ್‌ಪೆಕ್ಟರ್‌ ಕುಮಾರ್,  ಚೆನ್ನೇಗೌಡ ಅವರ ಮನೆಗೆ ಕೆಲ ಪುಂಡರನ್ನ ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಮನೆ ನೋಡಿಕೊಂಡು ಬರಲು ಠಾಣೆಯ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರ ಜೊತೆ ಅವರ ಸಂಬಂಧಿಕರನ್ನ ಕಳುಹಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.

ಮಾ. 18ರಂದು ಸಮಯ 3:25 ನಿಮಿಷಕ್ಕೆ ಕೆಂಪು ಬಣ್ಣದ ಕೆಎ 42 ಪಿ 0919 ನೋಂದಣಿಯ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನಿಸಿದ ಚೆನ್ನೇಗೌಡ ಅವರು ವಿಡಿಯೋ ಸಹ ಮಾಡಿದ್ದರು. ಈ ವೇಳೆ ಸ್ಟೇಷನ್‌ನಿಂದ ಕಾರು ಸಮೇತ ಕರೆದುಕೊಂಡು ಬರುವುದಾಗಿ ಹೇಳಿದ್ದಾರೆ ಎಂದು ಹೆಡ್ ಕಾನ್ಸ್ಟೇಬಲ್ ಉಮೇಶ್ ಅವರು ಅಲ್ಲಿಂದ ಎಸ್ಕೇಪ್ ಆಗಿದ್ದರು ಎಂದು ಆರೋಪಿಸಲಾಗಿದೆ.

ನಾಗರಭಾವಿಯ ಖಾಸಗಿ ಹೊಟೇಲ್‌ನಲ್ಲಿ ಡೀಲ್ ಮಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಲೋಕಾ ದಾಳಿ ನಡೆಸಿದೆ. ಹೆಡ್ ಕಾನ್ಸ್‌ಟೇಬಲ್ ಉಮೇಶ್, ಅನಂತ್ ಲೋಕಾ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಠಾಣೆಯ ಸಿಬ್ಬಂದಿಗಳನ್ನ ಹಾಗೂ ಸಿಕ್ಕಿಬಿದ್ದ ಸಿಬ್ಬಂದಿಗಳನ್ನು ಗುರುವಾರ ಸಂಜೆ 5 ಗಂಟೆಯಿಂದ ಬೆಳಗಿನ ಜಾವದವರೆಗೆ ವಿಚಾರಣೆ ನಡೆಸಿದ್ದು, ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment